ಸರ್ಕಾರದ ವಿರುದ್ಧವಾಗಿ ಇಂದು ಕೈ ನಾಯಕರಿಂದ ಪ್ರತಿಭಟನೆ

ಬುಧವಾರ, 18 ಸೆಪ್ಟಂಬರ್ 2019 (09:35 IST)
ಬೆಂಗಳೂರು : ನೆರೆ ಹಾಗೂ ಬರ ಪೀಡಿತ ಪ್ರದೇಶಗಳಿಗೆ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಇಂದು ಕಾಂಗ್ರೆಸ್ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಿದೆ ಎಂಬುದಾಗಿ ತಿಳಿದುಬಂದಿದೆ.ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಸಿಎಲ್ ಪಿ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಯಲಿದ್ದು, ಬೆಳಗ್ಗೆ 10.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯ ಬಳಿಕ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಶಾಸಕರು ಪ್ರತಿಭಟನೆ ನಡೆಸಲಿದ್ದಾರೆ ಎನ್ನಲಾಗಿದೆ.

 

ನೆರೆ ಹಾಗೂ ಬರ ಪೀಡಿತ ಪ್ರದೇಶಗಳಿಗೆ ಪರಿಹಾರ ನೀಡದೆ ಸರ್ಕಾರ ಕಡೆಗಣಿಸಿದೆ. ಅಲ್ಲದೆ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಇಂದು ಕೈ ಶಾಸಕರುಗಳು ಪ್ರತಿಭಟನೆ ನಡೆಸಲಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಐಸಿಐಸಿಐ ಬ್ಯಾಂಕ್ 'ಶೂನ್ಯ ಬ್ಯಾಲೆನ್ಸ್' ಖಾತೆದಾರರಿಗೆ ಶಾಕಿಂಗ್ ನ್ಯೂಸ್