Webdunia - Bharat's app for daily news and videos

Install App

ಕೋರ್ಸ್ ಮಾನ್ಯತೆಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ: ಐವರು ಅಸ್ವಸ್ಥ

Webdunia
ಬುಧವಾರ, 28 ಜನವರಿ 2015 (16:34 IST)
ಮೈಸೂರು ವಿಶ್ವ ವಿದ್ಯಾಲಯದಲ್ಲಿ ಅಳವಡಿಸಿರುವ ಎಂಎಸ್ಸಿ.ಎಡ್ ಎಂಬ ಕೋರ್ಸ್‌ಗೆ ಯುಜಿಸಿ ಮಾನ್ಯತೆ ನೀಡಿಲ್ಲ ಎಂದು ತಿಳಿದ ವಿದ್ಯಾರ್ಥಿಗಳು ಕೋರ್ಸ್‌ಗೆ ಯುಜಿಸಿ ಮಾನ್ಯತೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಐವರು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ ಘಟನೆ ಇಂದು ನಗರದಲ್ಲಿ ನಡೆಯಿತು. 

ಪ್ರತಿಭಟನೆಯನ್ನು ನಗರದಲ್ಲಿನ ವಿಶ್ವ ವಿದ್ಯಾಲಯದ ಪ್ರಧಾನ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಕೋರ್ಸ್ ನಲ್ಲಿ ಕಲಿಯುತ್ತಿರುವ ಎಲ್ಲಾ ವಿದ್ಯಾರ್ಥಿಗಳೂ ಕೂಡ ಭಾಗವಹಿಸುವ ಮೂಲಕ ಸಾಥ್ ನೀಡಿದ್ದಾರೆ. 
 
ಈ ಕೋರ್ಸ್ ನ ಕಾಲಾವಧಿ 6 ವರ್ಷಗಳಾಗಿದ್ದು, ಇಂಟಿಗ್ರೆಟೆಡ್ ಕೋರ್ಸ್ ಎಂದು ನಾಮಾಂಕೃತಗೊಳಿಸಿ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ನೇರವಾಗಿ ಪ್ರವೇಶ ಮಾಡಬಹುದಾಗಿದೆ. ಇನ್ನು ಕೋರ್ಸ್ ನಲ್ಲಿ ಕಲಿಯುತ್ತಿರುವ ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳು ಈ ವರ್ಷ ಪದವಿ ಮುಗಿಸಿ ಹೊರಹೋಗುವ ತವಕದಲ್ಲಿದ್ದರು. ಈ ನಡುವೆಯೇ ಈ ವಿಷಯ ತಿಳಿದಿರುವುದು ವಿದ್ಯಾರ್ಥಿಗಳಲ್ಲಿ ಆಘಾತ ಮೂಡಿಸಿದೆ.  
 
ಈ Msc.Ed ಎಂಬ ಕೋರ್ಸನ್ನು ಕಳೆದ 6 ವರ್ಷಗಳ ಹಿಂದೆ ಪ್ರಾರಂಭಿಸಿದ್ದು, ಇದರಲ್ಲಿ ಸುಮಾರು 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಆದರೆ ಯುಜಿಸಿ ಇದನ್ನು ಮಾನ್ಯತೆಗೊಳಪಡಿಸದಿರುವ ಕಾರಣ ಪ್ರಸ್ತುತ ವಿದ್ಯಾರ್ಥಿಗಳು ಪ್ರತಿಭಟನೆಗಿಳಿದಿದ್ದಾರೆ. ಅಲ್ಲದೆ ಮಾನ್ಯತೆ ನೀಡುವಂತೆ ಯುಜಿಸಿಗೆ ಕೇಂದ್ರ  ನಿರ್ದೇಶಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments