Publish Date: Tue, 25 Jun 2019 (12:40 IST)
Updated Date: Tue, 25 Jun 2019 (12:42 IST)
ಬೆಂಗಳೂರು : ಪರಿಶಿಷ್ಟ ಪಂಗಡದವರಿಗೆ ಶೇಕಡಾ 7.5ರಷ್ಟು ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ವಾಲ್ಮೀಕಿ ಸಮುದಾಯದವರು ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದಾರೆ.
ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮಿಜಿಯವರ ನೇತೃತ್ವದಲ್ಲಿ ನಡೆದ ಪಾದಯಾತ್ರೆಯಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿದ್ದು, ಇಂದು ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದಾರೆ.
ರಾಜ್ಯ ಸರ್ಕಾರಕ್ಕೆ ತಮ್ಮ ಬೇಡಿಕೆಯ ಮನವರಿಕೆ ಮಾಡುವ ನಿಟ್ಟಿನಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಇತ್ತ ಹೋರಾಟಗಾರರ ಪ್ರತಿಭಟನೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ.