Select Your Language

Notifications

webdunia
webdunia
webdunia
webdunia

ಬಿಬಿಎಂಪಿ.ಕೇಂದ್ರ ಕಛೇರಿಯ ಎದಿರು ಆಶಾ ಕಾರ್ಯಕರ್ತೆಯರ ಪ್ರೊಟೆಸ್ಟ್

webdunia
bangalore , ಸೋಮವಾರ, 15 ನವೆಂಬರ್ 2021 (19:25 IST)
webdunia
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಸಲ್ಲಿಸುವಂತೆ ಒತ್ತಾಯಿಸುತ್ತಿರುವ ಆಶಾ ಕಾರ್ಯಕರ್ತೆಯರು ಯರು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ದಿಢೀರ್ ಪ್ರತಿಭಟನೆ ನಡೆಸುತ್ತಿದ್ದಾರೆ. 
 
ನಿಗದಿತ ಸಮಯಕ್ಕೆ ವೇತನ ಬಿಡುಗಡೆ ಮಾಡಬೇಕು, ಬಸ್ ಪಾಸ್ ವ್ಯವಸ್ಥೆ ಕಲ್ಪಿಸಬೇಕು, ಆರೋಗ್ಯ ಕಾಡ್೯ ಮಾಡಬೇಕು. ನಿಗದಿತ ಕೆಲಸಕ್ಕೆ ಮಾತ್ರ ಬಳಸಬೇಕು. ಕೆಲಸಕ್ಕೆ ಸಮಯವನ್ನು ನಿಗದಿಪಡಿಸಬೇಕು ಎಂದು ಒಟ್ಟು 12 ಬೇಡಿಕೆಗಳನ್ನು ಇಟ್ಟು ಪ್ರತಿಭಟನೆ ನೆಡೆಸಿದರು.  
 
ಸ್ಥಳಕ್ಕೆ ಆಗಮಿಸಿದ ಬಿಬಿಎಂಪಿ ವಿಶೇಷ ಆಯುಕ್ತ ತ್ರಿಲೋಕ ಚಂದ್ರ ಬೇಡಿಕೆ ಸಂಗ್ರಹಿಸುವಂತೆ ಭರವಸೆ ನೀಡಿ ಪ್ರತಿಭಟನಾಕಾರರನ್ನ ಮನವೊಲಿಸಿದರು.
 
ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಕಳೆದ ಒಂದೂವರೆ ವರ್ಷದಿಂದ ಕೊರೋನಾ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವಲ್ಲಿ ತಮ್ಮ ಜೀವದ ಹಂಗು ತೊರೆದು, ಕರೋನಾ ವಾರಿಯರ್ಸ್ ಆಗಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದ್ದಾರೆ. ಜನರಿಗೆ ಲಸಿಕೆ ಹಾಕುವಲ್ಲಿ, ಲಸಿಕೆ ಸುತ್ತುವರೆದಿರುವ ವಿವಿಧ ರೀತಿಯ ಕೆಲಸಗಳನ್ನು ಹಗಲಿರುಳು ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರ ಕೋವಿಡ್ ಕೆಲಸಗಳ ಜೊತೆಗೆ ಹಲವಾರು ಸಮೀಕ್ಷೆಗಳು, ಮೂಲ ಕೆಲಸಗಳಾದ ಸುಗಮ ಹೆರಿಗೆ, ಸ್ವಸ್ಥ ಮಗುವಿನ ಜನನ, ತಾಯಿ-ಶಿಶು ವೈದ್ಯರ ಕುರಿತ ಸೇವೆಗಳು, ಗ್ರಾಮ ನೈರ್ಮಲ್ಯ ಸೇರಿದಂತೆ ವಿವಿಧ ಕಾರ್ಯ ಚಟುವಟಿಕೆಗಳನ್ನು ಸಹ ಮಾಡಬೇಕಾಗಿದೆ. ಆಶಾ ಕಾರ್ಯಕರ್ತೆ ದಿನಕ್ಕೆ 2 ಗಂಟೆ ಕೆಲಸ ಮಾಡಿದರೆ ಸಾಕು ಎಂದು ಹೇಳಿ ಪ್ರಾರಂಭದಲ್ಲಿ ಕೆಲಸವಿಂದು ದಿನವಿಡಿ ಮಾಡಿದ್ದಾಳೆ. 
 
ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಕೇಂದ್ರ ಕಾರ್ಮಿಕ ಸಂಘಟನೆಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿಯಿಂದ ಈ ಕೆಳಗಿನ ಸಮಸ್ಯೆಗಳಿಗೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿದರು.
 
ಪ್ರತಿಭಟನೆಯಲ್ಲಿ ಪಾಲಿಕೆಗೆ ಆಶಾ ಕಾರ್ಯಕರ್ತೆಯರ ಪ್ರಮುಖ ಹಕ್ಕೊತ್ತಾಯಗಳು:
 
1. ಪ್ರತೀ ತಿಂಗಳು ನಿರ್ದಿಷ್ಟ ದಿನಾಂಕದೊಳಗೆ ರಾಜ್ಯ ಹಾಗೂ ಕೇಂದ್ರದ ಪ್ರೋತ್ಸಾಹಧನ ಆಶಾಗಳಿಗೆ ದೊರೆಯುವಂತೆ ಮಾಡಿ. 2. ಆಶಾಗೆ ನಿಗದಿಪಡಿಸಿದ ಕ್ಷೇತ್ರದಲ್ಲಿ ಆಕೆ ಮಾತ್ರ ಕೆಲಸ ಮಾಡಬೇಕು. ಬೇರೆ ಪ್ರದೇಶಗಳಿಗೆ ಸೂಚಿಸಬಾರದು ಎಂಬ ಆದೇಶ ಪಾಲನೆ ಮಾಡಿ
3. ಎಲ್ಲಾ ಸಾರ್ವಜನಿಕ ಕಾರ್ಯನಿರ್ವಹಣೆಯಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಅವರಿಗೆ ನಿಗದಿಪಡಿಸಿರುವ ಜನ ಸಂಖ್ಯೆ ಹಾಗೂ ಬೆಂಗಳೂರಿನ ಮಹಾನಗರದ ಜೀವನ ಮಟ್ಟಕ್ಕೆ 50000 ರೂ. 
4. ಇಲಾಖೆಯ ಆದೇಶದಂತೆ ಎನ್‌ಸಿಡಿ ಸರ್ವೆ, ಕ್ವಾರಂಟ ಅಪ್ ಮೂಲಕ ಕೆಲಸ, ಈ-ಸಮೀಕ್ಷೆ ಕೆಲಸಗಳನ್ನು ಆಶಾಗಳಿಂದ ಒತ್ತಾಯ ಪೂರ್ವಕವಾಗಿ ಮಾಡುವುದನ್ನು ಕೈಬಿಡಿ.
5. ಇಲಾಖೆಯ ಸುತ್ತೋಲೆಗಳಂತೆ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಕೈಮ್ ರಿಪೋರ್ಟ್ ಮತ್ತು ರಿಲೀಸ್ ಕಾಪಿಗಳನ್ನು ಕಡ್ಡಾಯವಾಗಿ ನೀಡಿ.
6. ಆರ್.ಸಿ.ಹೆಚ್ ಪೋರ್ಟಲ್‌ನಲ್ಲಿ ಎ.ಎನ್.ಸಿ. ಹಾಗೂ ಪಿ.ಎನ್.ಸಿ ಸೇರಿದಂತೆ ಹಲವು ಆಶಾ ಕೆಲಸಗಳು ಡಾಟಾ ಎಂಟ್ರಿ ಆಗುತ್ತಿಲ್ಲ. ಇದರ ಬಗ್ಗೆ ಕ್ರಮ ಕೈಗೊಳ್ಳಿ 
7. ಆಶಾ ಕಾರ್ಯಕರ್ತೆಯರ ಕಾರ್ಯ ಚಟುವಟಿಕೆಗಳು ಅವರ ಜನ ಸಂಖ್ಯೆ (2,500 ವ್ಯಾಪ್ತಿ) ಮೀರಿದಂತೆ ಕ್ರಮ ವಹಿಸಿ, 8. ಕಫ ಪರೀಕ್ಷೆ ಸ್ಯಾಂಪಲ್ ತರಲು ಎಲ್ಲಾ ಕಡೆ ಆಶಾಗಳಿಗೆ ಒತ್ತಾಯಿಸಿ ಸುತ್ತೋಲೆಯಲ್ಲಿರುವಂತೆ ಆಶಾಗಳಲ್ಲಿದ್ದರೂ ಈ ಕೆಲಸಗಳನ್ನು ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳಿ.
9 . ಮೂರು ತಿಂಗಳಿಗೊಮ್ಮೆ ಆಶಾ ಕಾರ್ಯಕರ್ತೆಯರ ಕುಂದುಕೊರತೆ ನಿವಾರಣಾ ಸಭೆಯನ್ನು ಸಂಘಟಿಸುವುದರ ಬಗ್ಗೆ ಆದೇಶವಿದ್ದು ಅದರ ಬಗ್ಗೆ ಈ ಕೂಡಲೇ ಕ್ರಮ ಕೈಗೊಳ್ಳಿ.
10. ಕೋವಿಡ್-19 ನಿಯಂತ್ರಣ ಚಟುವಟಿಕೆಗಳಲ್ಲಿ ಡಾಟಾ ತುಂಬುವುದು, ಲಸಿಕಾ ಕೇಂದ್ರದಲ್ಲಿ ವಿವಿಧ ಕೆಲಸಗಳನ್ನು ಮಾಡುವುದು, ಸ್ವಾಬ್ ತೆಗೆಯುವ ಕೇಂದ್ರದಲ್ಲಿ ವಿವಿಧ ಚಟುವಟಿಕೆಗಳ ಆಶಾಗಳನ್ನು ಭಾಗಿ ಮಾಡುವುದನ್ನು ನಿಲ್ಲಿಸಿ.
11. ಅಗತ್ಯವಿರುವಷ್ಟು ಮಾಸ್ಕ್, ಸ್ಯಾನಿಟೈಸರ್, ಗೌಸ್, ಫೇಸ್ ಶೀಲ್ಡ್ ಗಳನ್ನು ನಿಯಮಿತವಾಗಿ ನೀಡಿ.
Share this Story:

Follow Webdunia kannada

ಮುಂದಿನ ಸುದ್ದಿ

ನಿರ್ಮಲಾ ಸೀತಾರಾಮನ್ ರಾಜ್ಯಗಳ ಮುಖ್ಯಮಂತ್ರಿ ಗಳೊಂದಿಗೆ ನಡೆಸಿದ ವಿಡಿಯೋ ಸಂವಾದ