Publish Date: Fri, 01 Jun 2018 (10:08 IST)
Updated Date: Fri, 01 Jun 2018 (10:10 IST)
ಬೆಂಗಳೂರು: ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯದ ‘ಕಾಲ’ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಮಾಡುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.
ರಜನೀಕಾಂತ್ ಕಾವೇರಿ ವಿಚಾರದಲ್ಲಿ ಕರ್ನಾಟಕ ವಿರೋಧಿ ಹೇಳಿಕೆ ನೀಡಿರುವುದು ಇದೀಗ ಅವರ ಸಿನಿಮಾ ಬಿಡುಗಡೆಗೆ ಕುತ್ತಾಗಿದೆ. ರಜನಿ ಸಿನಿಮಾ ಬಿಡುಗಡೆ ಮಾಡದೇ ಇರಲು ಈಗಾಗಲೇ ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾರಾ ಗೋವಿಂದು, ವಿತರಕರ ಸಂಘ ನಿರ್ಧರಿಸಿತ್ತು.
ಇದರ ಬೆನ್ನಲ್ಲೇ ಇದೀಗ ಕರುನಾಡ ಸೇವಕರ ಸಂಘ ಸಿಎಂ ಎಚ್ ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ರಜನಿ ಸಿನಿಮಾ ಬಿಡುಗಡೆಗೆ ಅವಕಾಶ ಮಾಡಿಕೊಡಬಾರದು ಎಂದು ಒತ್ತಾಯಿಸಿದೆ. ರಜನಿ ಕನ್ನಡಿಗರಿಗೆ ದ್ರೋಹ ಮಾಡಿದ್ದಾರೆ. ಅವರ ಚಿತ್ರ ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅವಕಾಶ ಕೊಡಬಾರದು ಎಂದು ಕರುನಾಡ ಸಂಘ ಒತ್ತಾಯಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.