Select Your Language

Notifications

webdunia
webdunia
webdunia
webdunia

ಜಾರ್ಜ್ ರಾಜೀನಾಮೆ ನೀಡುವವರೆಗೆ ನಿರಂತರ ಹೋರಾಟ: ಬಿಎಸ್‌ವೈ ಗುಡುಗು

ಜಾರ್ಜ್ ರಾಜೀನಾಮೆ ನೀಡುವವರೆಗೆ ನಿರಂತರ ಹೋರಾಟ: ಬಿಎಸ್‌ವೈ ಗುಡುಗು
ಬೆಂಗಳೂರು , ಮಂಗಳವಾರ, 12 ಜುಲೈ 2016 (17:41 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೆ ವಿಧಾನಸೌಧ ಮತ್ತು ವಿಧಾನಪರಿಷತ್‌ನಲ್ಲಿ ನಿರಂತರ ಪ್ರತಿಭಟನೆ ನಡೆಸಿ, ನಾನು ವಿಧಾನಸೌಧದ ಹೊರಗಡೆ ಪ್ರತಿಭಟನೆ ನಡೆಸುತ್ತೇನೆ ಎಂದು ಬಿಜಿಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಘೋಷಿಸಿದ್ದಾರೆ.
 
ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡುವವರೆಗೆ ಪ್ರತಿಭಟನೆ ಮುಂದುವರೆಸಿ ಎಂದು ಶಾಸಕರಿಗೆ ಸೂಚನೆ ನೀಡಿರುವ ಬಿ.ಎಸ್.ಯಡಿಯೂರಪ್ಪ, ಅಗತ್ಯ ಬಿದ್ದರೆ ಅಹೋರಾತ್ರಿ ಪ್ರತಿಭಟನೆ ನಡೆಸಿ ಎಂದು ತಿಳಿಸಿದ್ದಾರೆ.
 
ರಾಜ್ಯ ಸರಕಾರದ ಧೋರಣೆ ಖಂಡಿಸಿ ಮಡಿಕೇರಿಯಿಂದ ಬೆಂಗಳೂರಿನವರೆಗೂ ಪಾದಯಾತ್ರೆ ನಡೆಸುವ ಕುರಿತು ಇನ್ನು ಎರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ. 
 
ರಾಜ್ಯ ಸರಕಾರದ ವಿರುದ್ಧ ಹೋರಾಟ ಮುಂದುವರೆಸಲು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮತ್ತು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಔಪಚಾರಿಕ ಮಾತಕತೆ ನಡೆಸಿದ್ದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಗುಲಾಮ್ ನಬಿ ಆಜಾದ್‌ರನ್ನು ಭೇಟಿಯಾದ ಪ್ರಿಯಾಂಕಾ ವಾಡ್ರಾ