Select Your Language

Notifications

webdunia
webdunia
webdunia
webdunia

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪೊರಕೆ ಹಿಡಿದು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪೊರಕೆ ಹಿಡಿದು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು
ಹುಬ್ಬಳ್ಳಿ , ಶುಕ್ರವಾರ, 27 ಡಿಸೆಂಬರ್ 2019 (09:11 IST)
ಹುಬ್ಬಳ್ಳಿ : ಪೌರತ್ವ ಕಾಯ್ದೆ ವಿರೋಧಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರತಿಭಟನಾಕಾರರು ಪೊರಕೆ ಹಿಡಿದು ಪ್ರತಿಭಟನೆ ನಡೆಸಿದ ಘಟನೆ ಹುಬ್ಬಳಿಯಲ್ಲಿ ನಡೆದಿದೆ.



ಎದೆ ಸೀಳಿದ್ರೆ ಎರಡಕ್ಷರಗಳು ಇಲ್ಲದವರು, ಪಂಚರ್ ಹಾಕುವವರು ಮಾತ್ರ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಪೌರಕಾರ್ಮಿಕರು, ಕಟ್ಟಡ ಕಾರ್ಮಿಕರು, ಗ್ಯಾರೇಜ್ ಕೆಲಸಗಾರರ ವಿರುದ್ಧ ಕೀಳಾಗಿ ಮಾತನಾಡಿದ್ದಕ್ಕೆ ಪ್ರತಿಭಟನಾಕಾರರು ವಿರೋಧ ವ್ಯಕ್ತಪಡಿಸಿದ್ದಾರೆ.


ಈ ಹಿನ್ನಲೆಯಲ್ಲಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಪೌರ ಕಾರ್ಮಿಕರು ಹಾಗೂ ನೌಕರ ಸಂಘದ ವತಿಯಿಂದ ಹುಬ್ಬಳ್ಳಿ ಸಂಗೊಳ್ಳಿ ರಾಯಣ್ಣ ಸರ್ಕಲ್ ನಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪೊರಕೆ ಹಿಡಿದು, ಟಯರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

80ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡ ಜಗತ್ತಿನ ಅತೀ ಹಿರಿಯ ಜೋಡಿ