ಕಾವೇರಿ ವಿವಾದ ಕುರಿತಂತೆ ನಡೆಯುತ್ತಿರುವ ಹೋರಾಟ ತೀವ್ರ ತೆರವಾಗಿ ವ್ಯಾಪಿಸಿಕೊಳ್ಳುತ್ತಿದ್ದು, ಮಂಡ್ಯ ಜಿಲ್ಲೆಯಲ್ಲಿ ಮಾಜಿ ಸಚಿವ ಅಂಬರೀಶ್ ಮತ್ತು ಸಿಎಂ ಸಿದ್ದರಾಮಯ್ಯನವರ ಫ್ಲೆಕ್ಸ್‌ಗಳನ್ನು ಕಿತ್ತುಹಾಕಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಸಂಜಯ್ ವೃತ್ತದ ಬಳಿ ಜಮಾಯಿಸಿದ ಸಾವಿರಾರು ಪ್ರತಿಭಟನಾಕಾರರು ರಾತ್ರಿ ಹೊತ್ತು ಕದ್ದು ಮುಚ್ಚಿ ನೀರು ಬಿಡುವ ಸರಕಾರ ಹೇಟ ಸರಕಾರ ಎಂದು ಘೋಷಣೆಗಳನ್ನು ಕೂಗಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಒಂದು ಹನಿ ನೀರು ಬಿಡಬಾರದು ಎಂದು ಗುಡುಗಿದರು.
ನಗರದಲ್ಲಿ ಹಾಕಲಾಗಿದ್ದ ಮಾಜಿ ಸಚಿವ ಅಂಬರೀಶ್ ಅವರ ಭಾವಚಿತ್ರವಿದ್ದ ಕಟೌಟ್‌ಗಳನ್ನು ಕಿತ್ತುಹಾಕಿ, ಕಾವೇರಿ ನೀರು ವಿವಾದದಲ್ಲಿ ರಾಜ್ಯಕ್ಕೆ ನ್ಯಾಯ ಒದಗಿಸುವಲ್ಲಿ ಪ್ರತಿಯೊಬ್ಬ ರಾಜಕಾರಣಿ ವಿಫಲವಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಸುಪ್ರೀಂಕೋರ್ಟ್ನಲ್ಲಿ ರಾಜ್ಯದ ಪರ ವಕೀಲರು ಸರಿಯಾದ ವಾದ ಮಂಡಿಸಿಲ್ಲವಾದ್ದರಿಂದ ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ ಎಂದು ಕಿಡಿಕಾರಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ