Select Your Language

Notifications

webdunia
webdunia
webdunia
webdunia

ಪ್ರತಿಭಟನಾಕಾರರಿಂದ ಮಂಡ್ಯ ನಗರದಲ್ಲಿರುವ ಕಾಂಗ್ರೆಸ್ ಕಚೇರಿ ಧ್ವಂಸ

ಪ್ರತಿಭಟನಾಕಾರರಿಂದ ಮಂಡ್ಯ ನಗರದಲ್ಲಿರುವ ಕಾಂಗ್ರೆಸ್ ಕಚೇರಿ ಧ್ವಂಸ
ಮಂಡ್ಯ , ಮಂಗಳವಾರ, 6 ಸೆಪ್ಟಂಬರ್ 2016 (15:06 IST)
ಸುಪ್ರೀಂಕೋರ್ಟ್ ತೀರ್ಪು ವಿರೋಧಿಸಿ ಮಂಡ್ಯ ಜಿಲ್ಲೆಯಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಹೋರಾಟ ತಾರಕಕ್ಕೇರಿದೆ. ಪ್ರತಿಭಟನಾಕಾರರು ಕಾಂಗ್ರೆಸ್ ಕಚೇರಿಯ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ.
 
ಇಂದು ಮಧ್ಯಾಹ್ನ ಕಾಂಗ್ರೆಸ್ ಕಚೇರಿಗೆ ನುಗ್ಗಿದ ಪ್ರತಿಭಟನಾಕಾರರು ಕಚೇರಿಯಲ್ಲಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಕಚೇರಿಯಲ್ಲಿರುವ ಫ್ಲೆಕ್ಸ್‌ಗಳನ್ನು ಕಿತ್ತುಹಾಕಿ, ಕಚೇರಿಯಲ್ಲಿದ್ದ ಮುಖಂಡರ ಭಾವಚಿತ್ರಗಳಿಗೆ ಚಪ್ಪಲಿ ಏಟು ನೀಡಿದರು.
 
ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಯತ್ನಿಸಿದಾಗ, ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ತೀವ್ರ ವಾಗ್ವಾದ ಉಂಟಾಯಿತು. ಕೆಲ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಯಾವುದೇ ಕಾರಣಕ್ಕೂ ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಲು ಬಿಡುವುದಿಲ್ಲ. ಒಂದು ವೇಳೆ ನೀರು ಹರಿಸಿದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಲಿದೆ ಎಂದು ಪ್ರತಿಭಟನಾ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಮತದಾರರ ಓಲೈಕೆ: ಸ್ಮಾರ್ಟ್‌ಫೋನ್‌ಗಳ ಉಚಿತ ವಿತರಣೆಗೆ ಅಖಿಲೇಶ್ ಭರವಸೆ