Webdunia - Bharat's app for daily news and videos

Install App

ವಕೀಲರಿಂದ ಪ್ರತಿಭಟನೆ: ಸಂಚಾರ ಅಸ್ಥವ್ಯಸ್ಥ

Webdunia
ಬುಧವಾರ, 3 ಡಿಸೆಂಬರ್ 2014 (13:19 IST)
ಬೆಳಗಾವಿಯಲ್ಲಿ ಕಾನೂನು ಆಡಳಿತಾತ್ಮಕ ನ್ಯಾಯಾಂಗ ಮಂಡಳಿ(ಕೆಎಟಿ)ಯನ್ನು ತೆರೆಯುವಂತೆ 15 ದಿನಗಳಿಂದ ಕೋರ್ಟ್ ಕಲಾಪವನ್ನು ಬಹಿಷ್ಕರಿಸಿದ್ದ ವಕೀಲರು ನಗರದಲ್ಲಿ ಇಂದು ಕಲ್ಲು ತೂರಾಟ ನಡೆಸುವ ಮೂಲಕ ಉಗ್ರ ಪ್ರತಿಭಟನೆ ನಡೆಸಿದ ಸನ್ನಿವೇಶ ಕಂಡುಬಂತು. 
 
ರಾಜ್ಯದ 6 ಸಾರಿಗೆ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿರುವ ವಕೀಲರ ತಂಡ ಸರ್ಕಾರದ ಸಾಕಷ್ಟು ಆಸ್ತಿಯನ್ನು ಹಾನಿಗೊಳಿಸಿದೆ. ಅಲ್ಲದೆ ಘಟನೆಯಲ್ಲಿ ಓರ್ವ ವ್ಯಕ್ತಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎನ್ನಲಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 2 ಗಂಟೆಗಳ ಕಾಲ ಕೈಗೊಂಡಿದ್ದ ಈ ಪ್ರತಿಭಟನೆ ಪರಿಣಾಮ ಸಂಚಾರ ವ್ಯವಸ್ಥೆ ಅಸ್ಥವ್ಯಸ್ಥವಾಗಿ ಸಾರ್ವಜನಿಕರು ಪರದಾಡುವಂತಾಯಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.  
 
ವಕೀಲರು ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದ್ದರು. ಆದರೆ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಭಾಗದ ವಕೀಲರ ತಂಡ ಪ್ರಸ್ತುತ ಪ್ರತಿಭಟನೆಗಿಳಿದಿದೆ. 
-------------------

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments