Webdunia - Bharat's app for daily news and videos

Install App

ಬಿಜೆಪಿ, ಆರ್‌ಎಸ್‌ಎಸ್‌ ಕುರಿತು ಪ್ರಚೋದನಾಕಾರಿ ಭಾಷಣ: ಖರ್ಗೆ ಬಂಧನಕ್ಕೆ ಆಗ್ರಹ

Sampriya
ಮಂಗಳವಾರ, 7 ಏಪ್ರಿಲ್ 2026 (20:20 IST)
Photo Credit X
ಬೆಂಗಳೂರು: ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಕುರಿತು ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಚೋದನಾಕಾರಿ ಭಾಷಣ ಮಾಡಿದ್ದು, ಅವರನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಪೊಲೀಸ್‌ ಮಹಾನಿರ್ದೇಶಕ ಎಂ.ಎ.ಸಲೀಂ ಅವರಿಗೆ ಇಂದು ಬಿಜೆಪಿ ನಿಯೋಗದಿಂದ ಮನವಿ ಸಲ್ಲಿಸಲಾಗಿದೆ.

ನಿಯೋಗದಲ್ಲಿ ಶಾಸಕರಾದ ಎಸ್.‌ ಮುನಿರಾಜು, ಸಿ. ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಎಸ್.‌ ಹರೀಶ್‌, ರಾಜ್ಯ ವಕ್ತಾರರಾದ ಪ್ರಕಾಶ್‌ ಎಸ್.‌ ಮತ್ತು ಪ್ರಮುಖರು ಇದ್ದರು.

ಈ ವೇಳೆ ಮಾತನಾಡಿದ ಶಾಸಕ ಎಸ್.ಮುನಿರಾಜು ಅವರು, ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ವಿರುದ್ಧ ಮೊಕದ್ದಮೆ ದಾಖಲಿಸಿ ಅವರನ್ನು ಬಂಧಿಸಲು ಒತ್ತಾಯಿಸಲಾಗಿದೆ.

ಅಸ್ಸಾಂನಲ್ಲಿ ನಿನ್ನೆ ಚುನಾವಣಾ ಭಾಷಣ ಮಾಡುವಾಗ ಕಾಂಗ್ರೆಸ್ ಪಕ್ಷದ ರಾಷ್ಟೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಮಾಜ್ ಮಾಡುವಾಗ ವಿಷಸರ್ಪ ಬಂದರೆ ನೀವು ನಮಾಜನ್ನು ನಿಲ್ಲಿಸಿ ಅದನ್ನು ಕೊಲ್ಲಿ; ನಮಾಜ್ ಮಾಡುವಾಗ ಬಿಜೆಪಿ, ಆರೆಸ್ಸೆಸ್‍ನವರು ಬಂದರೆ ನಮಾಜನ್ನು ನಿಲ್ಲಿಸಿ ಅವರನ್ನು ಕೊಲ್ಲಿ; ಇದು ಕುರಾನ್‍ನಲ್ಲಿ ಉಲ್ಲೇಖ ಆಗಿದೆ ಎಂದಿದ್ದಾರೆ. ಇದು ಬೆಂಕಿ ಹಚ್ಚುವ ಕೆಲಸ ಎಂದು ಟೀಕಿಸಿದರು.

ಕೋಮುಗಲಭೆ ಹರಡುವ ಸಂದರ್ಭಗಳು ಬರಬಹುದು. ದೇಶದ್ರೋಹಿಗಳು, ಮೂಲಭೂತವಾದಿಗಳಿಗೆ ಬೆಂಬಲ ಸೂಚಿಸುವ ಮಾತುಗಳಿವು. ಇದರ ವಿರುದ್ಧ ಹೋರಾಟ ಮಾಡಲಾಗುತ್ತಿದೆ. ನಾನು, ಜಿಲ್ಲಾಧ್ಯಕ್ಷ ಹರೀಶ್, ಶಾಸಕ ಮತ್ತು ಜಿಲ್ಲಾಧ್ಯಕ್ಷ ಸಿ.ಕೆ.ರಾಮಮೂರ್ತಿ, ಪ್ರಮುಖರಾದ ಪ್ರಕಾಶ್ ಮತ್ತಿತರರು ಡಿಜಿ-ಐಜಿಪಿ ಅವರನ್ನು ಭೇಟಿ ಮಾಡಿ ದೂರು ನೀಡಿದ್ದೇವೆ ಎಂದರು.

ಇದನ್ನು ಕೂಲಂಕಷವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಡಿಜಿ-ಐಜಿಪಿ ಹೇಳಿದ್ದಾರೆ ಎಂದು ತಿಳಿಸಿದರು. ಇದು ದೇಶದ್ರೋಹಿ ಮಾತು. ಇದನ್ನಾಡಿದ ಖರ್ಗೆಯವರನ್ನು ಬಂಧಿಸಲು ಒತ್ತಾಯಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments