Select Your Language

Notifications

webdunia
webdunia
webdunia
webdunia

545 ಪಿಎಸ್‌ ಐ ನೇಮಕಾತಿ ಮರು ಪರೀಕ್ಷೆಗೆ ಸರಕಾರ ನಿರ್ಧಾರ

psi exam home minister araga jnenedra ಅರಗ ಜ್ಞಾನೇಂದ್ರ ಪಿಎಸ್‌ ಐ
bengaluru , ಶುಕ್ರವಾರ, 29 ಏಪ್ರಿಲ್ 2022 (14:23 IST)
545 ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಪರೀಕ್ಷೆಯನ್ನು ರದ್ದುಗೊಳಿಸಿ ರಾಜ್ಯ ಸರಕಾರ ಪ್ರಕಟಿಸಿದೆ.
ಗೃಗಹ ಸಚಿವ ಅರಗ ಜ್ಞಾನೇಂದ್ರ ಶುಕ್ರವಾರ ಬೆಳಿಗ್ಗೆ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ್ದು, ಪಿಎಸ್‌ ಐ ಅಕ್ರಮ ಪರೀಕ್ಷೆಯನ್ನು ರದ್ದುಗೊಳಿಸಿ ಮತ್ತೊಮ್ಮೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರಕಟಿಸಿದರು.
ಪಿಎಸ್‌ ಐ ಅಕ್ರಮ ಪರೀಕ್ಷೆಯಲ್ಲಿ ಆರೋಪ ಎದುರಿಸುತ್ತಿರುವ ಆರೋಪಿಗಳನ್ನು ಹೊರತುಪಡಿಸಿ ಉಳಿದವರಿಗೆ ಪರೀಕ್ಷೆ ಮರು ಪರೀಕ್ಷೆ ನಡೆಸಲಾಗುವುದು. ಪರೀಕ್ಷೆಯಲ್ಲಿ 54,289 ಅಭ್ಯರ್ಥಿಗಳು ಹಾಜರಾಗಿದ್ದರು ಎಂದು ಅವರು ಹೇಳಿದರು.
ಒಂದಕ್ಕಿಂತ ಹೆಚ್ಚು ಕೇಂದ್ರಗಳಲ್ಲಿ ಪರೀಕ್ಷೆಯಲ್ಲಿ ಅಕ್ರಮ ಆಗಿದೆ ಎಂದು ತನಿಖೆಯಲ್ಲಿ ದೃಢಪಟ್ಟಿದೆ. ೩೦೦ ಕೇಂದ್ರಗಳಲ್ಲಿ ಅಕ್ರಮ ಎನ್ನಲಾಗಿದ್ದು, ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ ಎಂದು ಅರಗ ಜ್ಞಾನೇಂದ್ರ ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕಲ್ಲಿದ್ದಲು ತುರ್ತು ಸಾಗಾಟಕ್ಕೆ 42 ಪ್ರಯಾಣಿಕರ ರೈಲುಗಳು ರದ್ದು!