Publish Date: Wed, 20 Jul 2016 (10:49 IST)
Updated Date: Fri, 22 Nov 2019 (14:08 IST)
ರಾಜ್ಯದಲ್ಲಿ ಇಬ್ಬರು ಡಿವೈಎಸ್‌ಪಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಗಳು ಕಣ್ಣಮುಂದಿರುವಾಗಿಲೇ ಬೆಂಗಳೂರಿನಲ್ಲಿ ಮಹಿಳಾ ಪಿಎಸ್‌ಐವೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.
ಬೆಂಗಳೂರಿನ ವಿಜಯ ನಗರ ಪೊಲೀಸ್ ಠಾಣೆಯ ಪಿಎಸ್‌ಐ ರೂಪಾ ತಂಬದ ಅವರು ರಾಜಾಜೀನಗರದಲ್ಲಿರುವ ಪೊಲೀಸ್ ವಸತಿ ಗೃಹದಲ್ಲಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಿಂದ ಅಸ್ವಸ್ಥಗೊಂಡಿದ್ದ ಪಿಎಸ್‌ಐ ರೂಪಾ ಅವರನ್ನು ರಾಜಾಜೀನಗರದ ಸುಗುಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಅವರಿಗೆ ಚಿಕೆತ್ಸೆ ನೀಡಲಾಗುತ್ತಿದೆ. ರೂಪಾ ಅವರ ಆರೋಗ್ಯ ಸ್ಥಿತಿ ಚೇತರಿಕೆಯಾಗಿಲಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಇಲಾಖೆಯಲ್ಲಿನ ಕಿರುಕುಳದಿಂದ ತಮ್ಮ ಮಗಳು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪಿಎಸ್‌ಐ ರೂಪಾ ತಂಬದ ಅವರ ತಾಯಿ ಆರೋಪ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ