Select Your Language

Notifications

webdunia
webdunia
webdunia
webdunia

ರಸ್ತೆಯಲ್ಲಿ ಹೋಗುವ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಸೈಕೋ ಅರೆಸ್ಟ್

ರಸ್ತೆಯಲ್ಲಿ ಹೋಗುವ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಸೈಕೋ ಅರೆಸ್ಟ್
ಬೆಂಗಳೂರು , ಶುಕ್ರವಾರ, 16 ನವೆಂಬರ್ 2018 (10:15 IST)
ಬೆಂಗಳೂರು : ರಸ್ತೆಯಲ್ಲಿ ಹೋಗುವ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ವಿಕೃತ ಕಾಮಿಯೊಬ್ಬನನ್ನು ನಗರದ  ಹೊರವಲಯದ ಅವಲಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.


ಈತನ ಹೆಸರು ನಾರಾಯಣ್ ಕುಮಾರ್  ಎಂಬುದಾಗಿ ತಿಳಿದುಬಂದಿದ್ದು, ಈತ ಮಹಿಳೆಯರು ಮನೆ ಕೆಲಸ ಮಾಡುವಾಗ, ರಸ್ತೆಯಲ್ಲಿ ನಡೆದು ಹೋಗುವಾಗ ಕಾಮ ದೃಷ್ಟಿಯಿಂದ ನೋಡಿ ಐ ಲವ್ ಯು ಅಂತಾ ಹೇಳಿ ಎಂದು ಕಿರುಕುಳ ನೀಡುತ್ತಿದ್ದನಂತೆ.


ಬುಧವಾರ ಮಹಿಳೆಯೊಬ್ಬಳು  ಶಿಶುಮಂದಿರದಿಂದ ಮಗಳನ್ನು ಕರೆದುಕೊಂಡು ಹೋಗುತ್ತಿದ್ದಾಗ ಈತ ಆಕೆಯನ್ನು  ಅಡ್ಡಗಟ್ಟಿ ಐ ಲವ್ ಯು ಅಂತಾ ಹೇಳಿ ತನ್ನ ಜೊತೆ ಬರಬೇಕೆಂದು ಪೀಡಿಸಿದ್ದಾನೆ. ಇದಕ್ಕೆ ಆಕೆ ಒಪ್ಪದಿದ್ದಾಗ ಆಕೆಯ ಬಟ್ಟೆ ಹರಿದು ಹಲ್ಲೆ ನಡೆಸಿದ್ದಾನೆ.


ಈ ಸಂಬಂಧ ಸಂತ್ರಸ್ತ ಮಹಿಳೆ ನಾರಾಯಣ್ ವಿರುದ್ಧ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇತ್ತ ಈ ವಿಚಾರಕ್ಕೆ ಕೋಪಗೊಂಡ ನಾರಾಯಣ್ ಪತ್ನಿ ಮತ್ತು ಮಕ್ಕಳು ಮಹಿಳೆಯ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರಾಯಣ್ ಕುಟುಂಬಸ್ಥರ ಮೇಲೆಯೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆಯಿಂದ ಹೊರಗಡೆ ತೆರಳಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕರು