Publish Date: Tue, 27 Feb 2018 (09:12 IST)
Updated Date: Tue, 27 Feb 2018 (09:14 IST)
ಬೆಂಗಳೂರು: ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರವೆಸಗುತ್ತಿದ್ದ ಸೈಕೋ ಜೈಶಂಕರ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿದ್ದ ಸೈಕೋ ಜೈಶಂಕರ್ ಬ್ಲೇಡ್ ನಿಂದ ಕತ್ತು ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯ ರಾತ್ರಿ 2 ಗಂಟೆ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಹಿಂದೊಮ್ಮೆ ಈತ ಜೈಲಿನ ಗೋಡೆ ಹಾರಿ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದ. ಆದರೆ ಆಗ ಸೊಂಟ ಮುರಿದುಕೊಂಡು ಮತ್ತೆ ಜೈಲು ಸೇರಿದ್ದ. ಈತನ ಪತ್ತೆಗೆ ಪೊಲೀಸರು 15 ಲಕ್ಷ ರೂ. ಬಹುಮಾನವನ್ನೂ ಘೋಷಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ