ರಾಜ್ಯದಲ್ಲಿ ಹಿಜಾಬ್ ವಿವಾದದ ನಡುವೆ ನಾಳೆಯಿಂದ ಪಿಯುಸಿ ಹಾಗೂ ಡಿಗ್ರಿ ಕಾಲೇಜುಗಳು ಆರಂಭವಾಗಲಿದೆ. ಈ ಬಗ್ಗೆ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಫೆ.16 ರಿಂದ ಕಾಲೇಜುಗಳ ಆರಂಭಕ್ಕೆ ನಿರ್ಧರಿಸಲಾಗಿದೆ. ಹಿಜಾಬ್ ಗಲಭೆಯಿಂದಾಗಿ ಪಿಯುಸಿ ಹಾಗೂ ಡಿಗ್ರಿ ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು.
ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ, ಗೃಹ ಸಚಿವ ಆರಗ ಜ್ಞಾನೇಂದ್ರ, ಡಿಜಿ ಐಜಿಪಿ ಪ್ರವೀಣ್ ಸೂದ್ ಸೇರಿ ಶಿಕ್ಷಣ ಇಲಾಖೆ ಅಧಿಕಾರಿಗಳು ಸಭೆಯಲ್ಲಿದ್ದರು.
ರಾಜ್ಯದ ಪರಿಸ್ಥಿತಿ ಬಗ್ಗೆ ಚರ್ಚೆ ನಡೆದಿದೆ. ಬುಧವಾರದಿಂದ ಕಾಲೇಜುಗಳು ಆರಂಭವಾಗಲಿವೆ. ಈ ಬಗ್ಗೆ ಕೋರ್ಟ್ ಸೂಚನೆ ಇದೆ. ಅದನ್ನು ನಾವು ಪಾಲಿಸುತ್ತೇವೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲಾಗುವುದು. ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.