Publish Date: Thu, 02 Sep 2021 (18:22 IST)
Updated Date: Thu, 02 Sep 2021 (18:24 IST)
ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಹಾಗೂ ದ್ವಿತೀಯ ಪಿಯು ಕಾಲೇಜುಗಳಲ್ಲಿ ದಾಖ
ಲಾತಿ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.
ಈ ಹಿಂದೆ ಪ್ರಥಮ ಪಿಯು ದಾಖಲಾತಿಗೆ ಸೆಪ್ಟೆಂಬರ್ 1 ರವರೆಗೆ ಅವಕಾಶ ನೀಡಲಾಗಿತ್ತು ಮತ್ತು ದ್ವಿತೀಯ ಪಿಯುಗೆ ಆ.30 ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕೋರ್ಸ್ಗಳಿಗೆ ಸೆಪ್ಟೆಂಬರ್ 11 ರವರೆಗೆ ದಂಡ ಶುಲ್ಕವಿಲ್ಲದೆ ಪ್ರವೇಶ ಪಡೆಯಬಹುದಾಗಿದೆ.
ಅದೇ ರೀತಿ 670 ರೂ. ದಂಡ ಶುಲ್ಕದೊಂದಿಗೆ ಪ್ರವೇಶ ಪಡೆಯಲು ಸೆ.13 ರಿಂದ 25ರವರೆಗೆ, ಇನ್ನು 2890 ರೂ. ವಿಶೇಷ ದಂಡ ಶುಲ್ಕದೊಂದಿಗೆ ಸೆ.27 ರಿಂದ ಅ.5 ರವರೆಗೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ದಾಖಲಾತಿ ಪಡೆಯಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.