ಸಾಕಷ್ಟು ವಿರೋಧದ ನಡುವೆಯು ಪರಿಸರಕ್ಕೆ ವಿರುದ್ಧವಾಗಿ ಬೆಂಗಳೂರಿನ ಸ್ಯಾಂಕಿ ರಸ್ತೆ ವಿಸ್ತರಣೆ ಮತ್ತು ಮೇಲ್ಸೇತುವೆ ಯೋಜನೆ ಮುಂದುವರಿದೆ. ಹೀಗಾಗಿ ಬೆಂಗಳೂರಿನ ಕೆಲವು ಇದರ ವಿರುಧ್ದ ನಿವಾಸಿಗಳು ಆನ್‌ಲೈನ್ ಅರ್ಜಿ ಅಭಿಯಾನ ಆರಂಭಿಸಿದ್ದಾರೆ . ಹೌದು ಸ್ಯಾಂಕಿ ರಸ್ತೆ ವಿಸ್ತರಣೆ ಮತ್ತು ಅದೇ ರಸ್ತೆಯ ಬಾಷ್ಯಂ ವೃತ್ತದಿಂದ ಮಲ್ಲೇಶ್ವರಂ 18ನೇ ಕ್ರಾಸ್ ವರೆಗೆ ಮೇಲ್ಸೇತುವೆ ನಿರ್ಮಾಣ ಸರ್ಕಾರ ಕೈ ಹಾಕಿದೆ. ಈ ಯೋಜನೆಗಾಗಿ ಪೂರ್ಣ ಪ್ರಮಾಣದಲ್ಲಿ ಬೆಳೆದು ನಿಂತ ಪಾರಂಪರಿಕ 40 ಮರಗಳಿಗೆ ಕೊಡಲಿ ಹಾಕಲು ನಿರ್ಧರಿಸಲಾಗಿದೆ. ಇದರ ವಿರುದ್ಧ ಪರಿಸರವಾದಿಗಳು ಸೇರಿದಂತೆ ಸ್ಥಳಿಯ ನಿವಾಸಿಗಳು ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಬಿಬಿಎಂಪಿ ಮಾತ್ರ ಯೋಜನೆಯಿಂದ ಹಿಂದೆ ಸರಿದಿಲ್ಲ.ಆದ್ದರಿಂದ ಆಕ್ರೋಶಗೊಂಡಿರುವ ನಿವಾಸಿಗಳು ಆನ್‌ಲೈನ್‌ನಲ್ಲಿ ಅರ್ಜಿ ಅಭಿಯಾನ ಆರಂಭಿಸಿ ಸಹಿ ಸಂಗ್ರಹಿಸುತ್ತಿದ್ದಾರೆ. ಹೀಗಾಗಿ ಇದರ ವಿರುಧ್ದ ನಿವಾಸಿಗಳು ಬಿಬಿಎಂಪಿ ವಿರುದ್ದ ಕಿಡಿ ಕಾರುತ್ತಿದ್ದಾರೆ