ಶಾಸಕರ ನಡೆಗೆ ಸಾರ್ವಜನಿಕರ ಆಕ್ರೋಶ

Webdunia
ಬುಧವಾರ, 1 ಮಾರ್ಚ್ 2023 (15:12 IST)
7ನೇ ವೇತನ ಜಾರಿಗೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಮುಷ್ಕರಕ್ಕೆ ಸರ್ಕಾರಿ ನೌಕರರು ಮುಂದಾಗಿದ್ದರಿಂದ ರಾಜ್ಯದಲ್ಲಿ ಭಾರಿ ಸಮಸ್ಯೆ ಎದುರಾಗಿತ್ತು. ಸರ್ಕಾರಿ ಆಸ್ಪತ್ರೆಗಳ ಮುಂದೆ ರೋಗಿಗಳು ನರಳಾಡುವ ಪರಿಸ್ಥಿತಿ ಎದುರಾಯ್ತು. ಪರೀಕ್ಷೆಗಳು ಮುಂದೂಡಲ್ಪಟ್ಟಿವೆ. ಸರ್ಕಾರಿ ಕಚೇರಿಗಳು ಖಾಲಿ ಖಾಲಿಯಾಗಿವೆ. ಇದರ ನಡುವೆ ಇಲ್ಲೊಂದು ಸರ್ಕಾರಿ ಕಚೇರಿ ಶಾಸಕರನ್ನು ಒಳಗಡೆ ಕೂರಿಸಿಕೊಂಡು ಕೆಲಸ ಮಾಡಿದ್ದು ಆಚೆ ಜನ ಸಾಮಾನ್ಯರು ಕಾದುಕುಳಿತ ಘಟನೆ ನಡೆದಿದೆ. ಇಂದು ಮುಷ್ಕರ ಹಿನ್ನೆಲೆ ರಾಜ್ಯದಲ್ಲಿ ಬಹುತೇಕ ಸರ್ಕಾರಿ ಕಚೇರಿಗಳಿಗೆ ಬೀಗ ಹಾಕಲಾಗಿತ್ತು. ಆದ್ರೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸಾರ್ವಜನಿಕರಿಗೆ ಸೇವೆ ಸ್ಥಗಿತಗೊಳಿಸಿ ಕೇವಲ ಶಾಸಕರಿಗಾಗಿ ಮಾತ್ರ ಅಧಿಕಾರಿಗಳು ಕೆಲಸ ಮಾಡುತ್ತಿದ್ರು. ಕಚೇರಿಯ ಹೊರಗಡೆ ಬಾಗಿಲಿಗೆ ಬೀಗ ಹಾಕಿಕೊಂಡು ಒಳಗಡೆ JDS ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರನ್ನು ಕೂರಿಸಿಕೊಂಡು ಅಧಿಕಾರಿಗಳು ಅವರ ಕೆಲಸ ಮಾಡಿಕೊಟ್ಟಿದ್ದಾರೆ. ಜನ ಸಾಮಾನ್ಯರಿಗೊಂದು ನ್ಯಾಯ ಜನಪ್ರತಿನಿಧಿಗಳಿಗೊಂದು ನ್ಯಾಯ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಮಾಡಿಸಿದ ಆನೆ, ಚಾರ್ಮಾಡಿಯಲ್ಲಿ ನಿಜವಾಗ್ಲೂ ಆಗಿದ್ದೇನು

Karnataka Weather: ಮುಂದಿನ 24 ಗಂಟೆಯ ಹವಾಮಾನ ಬದಲಾವಣೆ ಕೇಳಿದ್ರೆ ಶಾಕ್

ಮನೆ ಕಟ್ಟೋಣ ಎಂದು ವಿಚ್ಛೇಧಿತ ಮಹಿಳೆಗೆ ಕೈಕೊಟ್ಟ ಎರಡನೇ ಗಂಡ, ಆಗಿದ್ದೇನು ಗೊತ್ತಾ

ಕನ್ನಡ, ಕೇರಳ ಭಾಷಾ ವಿವಾದ: ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಪ್ರೀತಿ ತಿರಸ್ಕರಿಸಿದ ಯುವತಿಗೆ ಪಾಗಲ್ ಪ್ರೇಮಿಯ ಕಾಟ, ಕೊನೆಗೂ ವಶಕ್ಕೆ

ಮುಂದಿನ ಸುದ್ದಿ
Show comments