Select Your Language

Notifications

webdunia
webdunia
webdunia
webdunia

ಅಲ್ಪಸಂಖ್ಯಾತರಿಗೆ ವಸತಿ ಯೋಜನೆ ಎಂದ ಸಿದ್ದರಾಮಯ್ಯ: ಹಾಗೆಂದ್ರೆ ಯಾರು ಸಾರ್ ಎಂದ ನೆಟ್ಟಿಗರು

Siddaramaiah
ಬೆಂಗಳೂರು: ಕರ್ನಾಟಕ ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿಯನ್ನು ಶೇ.15 ಕ್ಕೆ ಏರಿಕೆ ಮಾಡಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸಮರ್ಥನೆ ಕೊಡುತ್ತಿದ್ದಂತೇ ನೆಟ್ಟಿಗರು ಅಲ್ಪಸಂಖ್ಯಾತರು ಎಂದರೆ ಯಾರು ಎಂದು ಪ್ರಶ್ನೆ ಮಾಡಿದ್ದಾರೆ.

ರಾಜ್ಯದಲ್ಲಿ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಇದುವರೆಗೆ ಇದ್ದ ಶೇ.10 ಮೀಸಲಾತಿಯನ್ನು ಶೇ.15 ಕ್ಕೆ ಏರಿಕೆ ಮಾಡಿ ರಾಜ್ಯ ಸರ್ಕಾರ ಮೊನ್ನೆಯಷ್ಟೇ ಆದೇಶ ಹೊರಡಿಸಿತ್ತು. ಇದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು. ರಾಜ್ಯ ಬಿಜೆಪಿ ಇದು ಮುಸ್ಲಿಮರ ಓಲೈಕೆ ರಾಜಕಾರಣ ಎಂದಿತ್ತು.

ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಇದಕ್ಕೆ ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಸ್ಪಷ್ಟನೆ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನ್ವಯವೇ ನಾವು ಕ್ರಿಶ್ಚಿಯನ್, ಮುಸ್ಲಿಂ, ಜೈನ, ಬೌದ್ಧ ಸೇರಿದಂತೆ ಅಲ್ಪಸಂಖ್ಯಾತರ ಮೀಸಲಾತಿಯನ್ನು ಹೆಚ್ಚಿಸಿದ್ದೇವೆ. ಈ ಬಗ್ಗೆ ಬಿಜೆಪಿ ವಿನಾಕಾರಣ ರಾಜಕಾರಣ ಮಾಡಲು ಟೀಕೆ ಮಾಡುತ್ತಿದೆ ಎಂದಿದ್ದರು.

ಸಿದ್ದರಾಮಯ್ಯ ಸ್ಪಷ್ಟೀಕರಣಕ್ಕೆ ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ನಿಜವಾಗಿ ಈ ಅಲ್ಪಸಂಖ್ಯಾತರು ಎಂದರೆ ಯಾರು ಸಾರ್, ಸಂವಿಧಾನಶಿಲ್ಪಿ ಅಂಬೇಡ್ಕರ್ ಅವರು ಎಂದಾದರೂ ಧರ್ಮದ ಹೆಸರಿನಲ್ಲಿ ಮೀಸಲಾತಿ ನೀಡಬೇಕು ಎಂದಿದ್ದಾರಾ? ಎಂದು ಒಬ್ಬರು ಪ್ರಶ್ನೆ ಮಾಡಿದರೆ ಮತ್ತೆ ಕೆಲವರು 25 ಕೋಟಿ ಜನ ಸಂಖ್ಯೆ ಇರುವವರು ಅಲ್ಪಸಂಖ್ಯಾತರಾ ಎಂದಿದ್ದಾರೆ. ಮತ್ತೆ ಕೆಲವರು ಸಿದ್ದರಾಮಯ್ಯ ಸಮರ್ಥನೆಯನ್ನು ಒಪ್ಪಿಕೊಂಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಗೆ ಮತ್ತೆ ನೀವೇ ಅಧ್ಯಕ್ಷರಾ ಎಂದು ಕೇಳಿದ್ದಕ್ಕೆ ವಿಜಯೇಂದ್ರ ಹೇಳಿದ್ದೇನು ಗೊತ್ತಾ