Publish Date: Sat, 21 Feb 2026 (10:14 IST)
Updated Date: Sat, 21 Feb 2026 (10:18 IST)
ಬೆಂಗಳೂರು: ಕುರಿ ಕಾಯೋನು ಸಿಎಂ ಆಗಿದ್ದಕ್ಕೆ ಕೆಲವರಿಗೆ ಕಣ್ಣು ಕೆಂಪಗಾಗಿಸಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಕ್ಕೆ ಪಬ್ಲಿಕ್ ಸಾಕಷ್ಟು ಸಂಖ್ಯೆಯಲ್ಲಿ ಕಾಮೆಂಟ್ ಮಾಡಿದ್ದು ಜಾತಿ ವಿಚಾರ ಬಿಡಿ ಎಂದಿದ್ದಾರೆ.
ನಿನ್ನೆ ಟ್ವೀಟ್ ಮಾಡಿದ್ದ ಸಿಎಂ ಸಿದ್ದರಾಮಯ್ಯ ನನ್ನ ಮೇಲೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿಗಳು, ಮಾಡುತ್ತಿರುವ ಟೀಕೆ-ಆರೋಪಗಳಿಗೆ ನಾನು ಹುಟ್ಟಿದ ಜಾತಿಯೂ ಒಂದು ಕಾರಣ. ಕುರಿಕಾಯುತ್ತಾ ಇರಬೇಕಾದವನು ಮುಖ್ಯಮಂತ್ರಿ ಆಗಿ ಬಿಟ್ಟನಲ್ಲಾ, ಆರ್ಥಿಕ ತಜ್ಞರಿಗೆ ಸರಿಸಮನಾಗಿ ನಿಂತು ಸಾಲುಸಾಲು ಬಜೆಟ್ ಮಂಡಿಸಿ ಶಹಬ್ಬಾಸ್ ಗಿರಿ ಗಳಿಸುತ್ತಿದ್ದಾನಲ್ಲಾ ಎನ್ನುವ ಅಸಹನೆ, ಅವರೊಳಗೆ ದ್ವೇಷ, ಅಸೂಯೆ ಕುದಿಯುತ್ತಿದೆ. ಇವನೊಬ್ಬನನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ ಅದರ ನಂತರ ನಮ್ಮೆಲ್ಲರ ಹಾದಿ ಸುಲಭವಾಗುತ್ತದೆ ಎನ್ನುವ ರಾಜಕೀಯ ದುರುದ್ದೇಶದ ಲೆಕ್ಕಾಚಾರ ಇವರ ಮನಸ್ಸಿನಲ್ಲಿದೆ ಎಂದಿದ್ದರು.
ಅವರ ಟ್ವೀಟ್ ಗೆ ಸಾಕಷ್ಟು ಮಂದಿ ಕಾಮೆಂಟ್ ಮಾಡಿದ್ದಾರೆ. ಸುಮ್ಮನೇ ಜಾತಿ ವಿಚಾರ ಎಳೆದು ತರುವುದು ಬಿಟ್ಟು ಅಭಿವೃದ್ಧಿ ಕೆಲಸದ ಬಗ್ಗೆ ಮಾತನಾಡಿ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಕುರುಬ ಎನ್ನುವುದು ಬಿಟ್ಟು ಕುರುಬರೂ ಉದ್ಯೋಗಕ್ಕಾಗಿ ಕಾಯುತ್ತಿದ್ದಾರೆ. ಅವರಿಗೆ ಉದ್ಯೋಗ ಕೊಡಿ ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ.