Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಮಾರ್ಗಸೂಚಿ ಪ್ರಕಟ

ಬಿಬಿಎಂಪಿ ಮಾರ್ಗಸೂಚಿ ಪ್ರಕಟ
bangalore , ಶುಕ್ರವಾರ, 13 ಆಗಸ್ಟ್ 2021 (21:04 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು(RWA) ಮತ್ತು ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್ ಗಳಲ್ಲಿನ ನಿರ್ವಹಣಾ ಸಮಿತಿಗಳಿಗೆ ಕೋವಿಡ್ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಹೊರಡಿಸಿರುತ್ತಾರೆ. 
 
ಅದರಂತೆ ಕೋವಿಡ್-19 ಅನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರ ಅಡಿಯಲ್ಲಿ ಸಾಂಕ್ರಾಮಿಕ ರೋಗವೆಂದು ಸೂಚಿಸಲಾಗಿದೆ. ಈ ಸಂಬಂಧ ಬಿಬಿಎಂಪಿ ವ್ಯಾಪ್ತಿಯಲ್ಲಿ ಸೆಕ್ಷನ್ 4ರ ಅಡಿಯಲ್ಲಿ ರೋಗದ ಹರಡುವಿಕೆಯನ್ನು ನಿಯಂತ್ರಿಸಲು ಜಾರಿಗೊಳಿಸುವ ಕ್ರಮಗಳನ್ನು ಕೈಗೊಳ್ಳಲು ಪಾಲಿಕೆಗೆ ಅಧಿಕಾರ ನೀಡಲಾಗಿದೆ.
 
ಬೆಂಗಳೂರು ನಗರವು ಕಳೆದ 2 ವಾರಗಳಲ್ಲಿ 3 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ಒಟ್ಟಿಗೆ ಕಂಡುಬಂದರೆ ಅದನ್ನು ಕ್ಲಸ್ಟರ್ ಎಂದು ಗುರುತಿಸಲಾಗುತ್ತಿದೆ. ಜೊತೆಗೆ 100 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ಕಂಟೈನ್ಮೆಂಟ್ ವಲಯ ಎಂದು ಗುರುತಿಸಲಾಗುತ್ತದೆ. ಈ ಪೈಕಿ ಸಕ್ರಿಯ ಕೆಂಟೈನ್ಮೆಂಟ್ ವಲಯಗಳ ಸಂಖ್ಯೆ 160 ದಾಟಿದ್ದು,(09.08.2021 ರಂತೆ), ಅದರಲ್ಲಿ ಸುಮಾರು ಶೇ. 50 ರಷ್ಟು ಅಂದರೆ 79 ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್ಗಳು ಕಂಟೈನ್ಮೆಂಟ್ ವಲಯಗಳಿವೆ. ಈ ಸಂಬಂಧ ಅಪಾರ್ಟ್ಮೆಂಟ್ ಗಳಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕಾಗುತ್ತದೆ ಪಾಲಿಕೆ ಹೊರಡಿಸಿರುವ ಮಾರ್ಗಸೂಚಿಯಲ್ಲಿನ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ

Share this Story:

Follow Webdunia kannada

ಮುಂದಿನ ಸುದ್ದಿ

ವೃದ್ದಾಶ್ರಮದಲ್ಲಿ ಮಾಜಿ ಜಿಪಂ ಅಧ್ಯಕ್ಷೆ ಪಂಚಮಿ ಆಚರಣೆ