Select Your Language

Notifications

webdunia
webdunia
webdunia
webdunia

ಶಾಲಾ ಆರಂಭಕ್ಕೆ ಮಾರ್ಗಸೂಚಿ ಪ್ರಕಟ

ಶಾಲಾ ಆರಂಭಕ್ಕೆ ಮಾರ್ಗಸೂಚಿ ಪ್ರಕಟ
ಬೆಂಗಳೂರು , ಸೋಮವಾರ, 16 ಆಗಸ್ಟ್ 2021 (19:39 IST)
ಬೆಂಗಳೂರು (ಆ. 16): ಸೋಂಕು ಕಡಿಮೆ ಇರುವ ಕಡೆ ಆಗಸ್ಟ್ 23ರಿಂದ ಶಾಲೆ ಆರಂಭಕ್ಕೆ ಸರ್ಕಾರ ಸಿದ್ದತೆ ನಡೆಸಿದ್ದು, ಈ ಸಂಬಂಧ ಮಾರ್ಗಸೂಚಿ ಪ್ರಕಟಿಸಿದೆ. ಪಾಸಿಟಿವಿಟಿ ರೇಟ್ 2ಕ್ಕಿಂತ ಕಡಿಮೆ ಇರುವ ಕಡೆ 9 ರಿಂದ ದ್ವಿತೀಯ ಪಿಯುಸಿ ವರೆಗೆ ಶಾಲೆ- ಕಾಲೇಜು ಆರಂಭ ಮಾಡುವಂತೆ ಸೂಚಿಸಿದ್ದು, ಶಾಲಾ -ಕಾಲೇಜುಗಳು ಸರ್ಕಾರ ಪ್ರಕಟಿಸಿರುವ ಈ ಮಾರ್ಗಸೂಚಿ ಅನುಸರಿಸುವುದು ಕಡ್ಡಾಯವಾಗಿದೆ.

ಕಳೆದೊಂದು ವರ್ಷದ ಬಳಿಕ ಭೌತಿಕವಾಗಿ ಶಾಲೆ ಆರಂಭಕ್ಕೆ ಮುಂದಾಗುತ್ತಿರುವುದರಿಂದ, ಶಾಲಾ ಪ್ರಾರಂಭಕ್ಕೆ ಮುನ್ನ ಒಂದು ವಾರ ಕಡ್ಡಾಯವಾಗಿ ಶಾಲೆಯನ್ನು ಸಂಪೂರ್ಣವಾಗಿ ಸ್ವಚ್ಛ ಗೊಳಿಸಬೇಕು ಎಂದು ತಿಳಿಸಿದೆ.
ಸರ್ಕಾರ ಇಂದು 9 ಮತ್ತು 10ನೇ ತರಗತಿಯ ಮಾರ್ಗಸೂಚಿಯನ್ನು ಮಾತ್ರ ಪ್ರಕಟಿಸಿದ್ದು, ಪಿಯು ಕಾಲೇಜು ಮಾರ್ಗಸೂಚಿ ಪ್ರಕಟವಾಗಿಲ್ಲ. ಶಾಲಾ ಮಾರ್ಗಸೂಚಿ ನೋಡಿಕೊಂಡು  ಪಿಯು ಬೋರ್ಡ್ ಪ್ರಥಮ, ದ್ವಿತೀಯ ಪಿಯು ಕಾಲೇಜಿನಲ್ಲಿ ಅನುಸರಿಸಬೇಕಾದ ಕೊರೋನಾ  ಮಾರ್ಗಸೂಚಿ ನಾಳೆ ಪ್ರಕಟಿಸುವ ಸಾಧ್ಯತೆ ಇದೆ.
ಮಾರ್ಗಸೂಚಿಯ ಪ್ರಮುಖ ಅಂಶ
ಶಾಲೆಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಢಾಯವಾಗಿ ಪೋಷಕರಿಂದ ಅನುಮತಿ ಪತ್ರದ ಜೊತೆಗೆ ಮಗುವಿನ ಆರೋಗ್ಯ ಪ್ರಮಾಣ ಪತ್ರವನ್ನು ತರಬೇಕು. ಈ ಅನುಮತಿ ಪತ್ರದಲ್ಲಿ ಕೋವಿಡ್ ಸೋಂಕಿನ ಯಾವುದೇ ಲಕ್ಷಣಗಳಿಲ್ಲ ಇರುವುದನ್ನು ದೃಢಪಡಿಸಬೇಕು
•ಒಂದು ಕೊಠಡಿಗೆ ಕೇವಲ 20 ಮಕ್ಕಳಿಗೆ ಮಾತ್ರ ಕೂರಲು ಅವಕಾಶ. ಜೊತೆಗೆ ಒಂದು ಬೆಂಚ್ನಲ್ಲಿ ಒಂದೇ ಮಗುವಿಗೆ ಕೂರಲು ಅವಕಾಶ ನೀಡಬೇಕು.
•ಫ್ರೌಢಶಾಲೆಗಳನ್ನು ಅಂದರೆ 9 ಮತ್ತು 10ನೇ ತರಗತಿಯ ಭೌತಿಕ ತರಗತಿಗಳನ್ನು ಬೆಳಗಿನ ಅವಧಿ ಮಾತ್ರ ನಡೆಸಬೇಕು
•ಮಕ್ಕಳು ಶಾಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಅವರು ಶಾಲೆ ಆವರಣ ಪ್ರವೇಶಿಸುತ್ತಿದ್ದಂತೆ ಹ್ಯಾಂಡ್ ಸ್ಯಾನಿಟೈಸರ್ ಅಥವಾ ಸಾಬೂನಿನಿಂದ ಕೈ ಸ್ವಚ್ಛಕ್ಕೆ ಅವಕಾಶ ನೀಡಬೇಕು. ಧರ್ಮಲ್ ಸ್ಕ್ಯಾನರ್ನಿಂದ ವಿದ್ಯಾರ್ಥಿಗಳ ದೇಹದ ಉಷ್ಣತೆ ಪರೀಕ್ಷಿಸಬೇಕು.
•ಶಾಲೆಗೆ ಆಗಮಿಸುವ ಮತ್ತು ನಿರ್ಗಮಿಸುವ ವೇಳೆ ದಟ್ಟಣೆ ಆಗದಂತೆ ನೋಡಿಕೊಳ್ಳಬೇಕು.
ವಿದ್ಯಾರ್ಥಿಗಳ ದಿನನಿತಯದ ಆರೋಗ್ಯದ ಸ್ಥಿತಿ ವಿವರ ಪಡೆಯಬೇಕು. ಯಾವುದೇ ವಿದ್ಯಾರ್ಥಿಗೆ ಕೆಮಮು, ಜ್ವರ, ನೆಗಡಿ, ಮೂಗು ಸೋರಿಕೆ ಕಂಡು ಬಂದರೆ, ಐಸೋಲೇಷನ್ನಲ್ಲಿ ತಾತ್ಕಾಲಿಕವಿರಿಸಿ, ಬಳಿಕ ಪೋಷಕರು ಸಂಪರ್ಕಿಸಿ ಮನೆಗೆ ಕಳುಹಿಸಬೇಕು.
•ವಿದ್ಯಾರ್ಥಿಗಳು ಮನೆಯಿಂದಲೇ ನೀರು ಮತ್ತು ಆಹಾರ ತರುವಂತೆ ಸೀಚಿಸಬೇಕು. ಜೊತೆಗೆ ಅವಶ್ಯಕತೆ ಇದ್ದಲ್ಲಿ ಮಕ್ಕಳಿಗೆ ಶಾಲೆಯಲ್ಲಿ ಶುದ್ಧ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು
ಗ್ರಂಥಾಲಯ, ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಒಳಾಂಗಡ ಕ್ರೀಡಾಗಂಣದಲ್ಲಿ ಶುಚಿತ್ವದ ಜೊತೆ ಸಾಮಾಜಿಕ ಅಂತರ ಕಾಪಾಡುವುದು ಅವಶ್ಯ
•ವಿದ್ಯಾರ್ಥಿಗಳು ತಮ್ಮ ನಡುವೆ ವಸ್ತುಗಳನ್ನು ಪರಸ್ಪರ ವಿನಿಮಯ ಮಾಡದಂತೆ ನೋಡಿಕೊಳ್ಳಬೇಕು
•ಶಾಲೆಗೆ ಹಾಜರಾಗುವ ಶಿಕ್ಷಕರು ಕೋವಿಡ್ ನೆಗೆಟಿವ್ ವರದಿ ಕಡ್ಡಾಯ. ಜೊತೆಗೆ ಕರ್ತವ್ಯಕ್ಕೆ ಹಾಜರಾಗುವ ಮೂರು ದಿನ ಮುಂಚಿತ ಆರ್ಟಿಪಿಸಿಆರ್ ನೆಗೆಟಿವ್ ವರದಿಯನ್ನು ಸಲ್ಲಿಸಬೇಕು
•ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ಮಾಸ್ಕ್ ಧರಿಸುವುದು ಕಡ್ಡಾಯ
•50 ವರ್ಷ ಮೀರಿದ ಶಿಕ್ಷಕರು ಮಾಸ್ಕ್ ಜೊತೆಗೆ ಫೇಸ್ ಶೀಲ್ಡ್ ಧರಿಸುವುದು ಉತ್ತಮ.
ಆಗ್ಗಿಂದಾಗ್ಗೆ ಕೈ ಶುಚಿತ್ವ ಕಾಪಾಡಿಕೊಳ್ಳಬೇಕು
•ಮುಖ್ಯ ಶಿಕ್ಷಕರು ಸೇರಿದಂತೆ ಶಾಲೆಯ ಶಿಕ್ಷಕರು, ಸಿಬ್ಬಂದಿಗಳು ಒಂದು ಡೋಸ್ ಲಸಿಕೆ ಪಡೆದಿದ್ದಾರೆ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು. ಜೊತೆಗೆ ಎರಡನೇ ಡೋಸ್ ಲಸಿಕೆ ಶೀಘ್ರವಾಗಿ ಪಡೆಯಲು ಪ್ರಯತ್ನಿಸಬೇಕು
•ವಿದ್ಯಾರ್ಥಿಗಳನ್ನು ಗುಂಪುಗೂಡಿಸುವಂತಹ ಸಭೆ, ಸಮಾರಂಭ, ಹಬ್ಬ ಮತ್ತು ಇತರೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಾರದು.
•ವಿದ್ಯಾರ್ಥಿಗಳು, ಶಿಕ್ಷಕರು, ಶಾಲಾ ಸಿಬ್ಬಂದಿಗಳು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.
•ಮಕ್ಕಳನ್ನು ಶಾಲೆಗೆ ಕಳುಹಿಸಲು ಕಡ್ಡಾಯವಾಗಿ ಲಿಖಿತವಾಗಿ ಪೋಷಕರಿಂದ ಒಪ್ಪಿಗೆ ಪತ್ರ ತರುವುದು ಕಡ್ಡಾಯವಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕೇರಳದಲ್ಲಿ ಕೊರೋನಾತಂಕ, ಖುದ್ದು ಅಖಾಡಕ್ಕೆ ಇಳಿದ ಕೇಂದ್ರ ಆರೋಗ್ಯ ಸಚಿವ!