Select Your Language

Notifications

webdunia
webdunia
webdunia
webdunia

ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಕ್ಕೆ ಮಾರ್ಗಸೂಚಿ ಪ್ರಕಟ

ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಕ್ಕೆ ಮಾರ್ಗಸೂಚಿ ಪ್ರಕಟ
ಬೆಂಗಳೂರು , ಗುರುವಾರ, 19 ಆಗಸ್ಟ್ 2021 (10:05 IST)
ಬೆಂಗಳೂರು, ಆಗಸ್ಟ್ 18: ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಕ್ಕೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟ ಮಾಡಿದೆ. ಕಾಲೇಜು ಆರಂಭಿಸುವ ಕುರಿತು ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಯಿಂದ ಕೆಲವು ಗೈಡ್ಲೈನ್ಸ್ ಬಿಡುಗಡೆ ಆಗಿದೆ.

ಶೇಕಡಾ 2ಕ್ಕಿಂತ ಕಡಿಮೆ ಕೊರೊನಾ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಕಾಲೇಜು ತೆರೆಯಲು ಸೂಚನೆ ನೀಡಲಾಗಿದ್ದು, ಏಕಕಾಲದಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ನಡೆಸಲಾಗುವುದು ಎಂದು ಹೇಳಲಾಗಿದೆ.
ವಾರದ ಮೊದಲ 3 ದಿನ ಶೇಕಡಾ 50ರಷ್ಟು ವಿದ್ಯಾರ್ಥಿಗಳಿಗೆ ಕ್ಲಾಸ್ ಮಾಡಬೇಕು. ಶೇಕಡಾ 50ರಷ್ಟು ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಾಜರಾಗಬೇಕು.
ಉಳಿದ ಶೇಕಡಾ 50 ರಷ್ಟು ವಿದ್ಯಾರ್ಥಿಗಳಿಗೆ ಮನೆಯಲ್ಲೇ ಆನ್ಲೈನ್ ತರಗತಿ ನಡೆಸುವುದು. ಗುರುವಾರ, ಶುಕ್ರವಾರ, ಶನಿವಾರ ಉಳಿದ ವಿದ್ಯಾರ್ಥಿಗಳಿಗೆ ತರಗತಿ ನಡೆಸುವ ಬಗ್ಗೆ ಸೂಚನೆ ಕೊಡಲಾಗಿದೆ.
ಆಗಸ್ಟ್ 23 ರಿಂದ ಪಿಯು ಕಾಲೇಜು ತರಗತಿಗಳು ಆರಂಭವಾಗಲಿದ್ದು, ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿ ಏಕಕಾಲಕ್ಕೆ ಆರಂಭ ಆಗಲಿದೆ. ಕಾಲೇಜು ಆರಂಭಿಸುವ ಕುರಿತು ರಾಜ್ಯ ಸರ್ಕಾರ ಮಾರ್ಗಸೂಚಿ ನೀಡಿದೆ.
ಪಿಯು ಕಾಲೇಜು ಆರಂಭಕ್ಕೆ ಸೂಚಿಸಿದ ಮಾರ್ಗಸೂಚಿಯ ಇತರೆ ಅಂಶಗಳು ಇಲ್ಲಿದೆ:
* ತರಗತಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ 100ಕ್ಕಿಂತ ಕಡಿಮೆ ಇರಬೇಕು.
* ವಿಶಾಲ ಕೊಠಡಿಗಳಿದ್ದರೆ ವಾರದ ಎಲ್ಲಾ ದಿನ ಭೌತಿಕ ತರಗತಿ ನಡೆಸಬಹುದು.
* ಕಾಲೇಜು ಆವರಣದಲ್ಲಿ ದೈಹಿಕ ಅಂತರ ಕಡ್ಡಾಯವಾಗಿರುತ್ತದೆ.
* ಪ್ರಾಂಶುಪಾಲರು, ಅಧ್ಯಾಪಕರು ಹಾಗೂ ಕಾಲೇಜು ಸಿಬ್ಬಂದಿ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು.
* ವಿದ್ಯಾರ್ಥಿಗಳು ಕಾಲೇಜಿಗೆ ಬರಲು ಪೋಷಕರ ಒಪ್ಪಿಗೆ ಇರಬೇಕು.
* ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೊವಿಡ್- 19 ನೆಗೆಟಿವ್ ವರದಿ ಕಡ್ಡಾಯ.
* ಕಾಲೇಜಿನ ಉಪನ್ಯಾಸಕರು ಹಾಗೂ ಪ್ರಾಂಶುಪಾಲರು ವಿದ್ಯಾರ್ಥಿಗಳಿಂದ ಕೋವಿಡ್ ನಿಯಮಗಳ ಉಲ್ಲಂಘನೆಯಾಗದಂತೆ ಗಮನಿಸಬೇಕು.
* ಮಾಸ್ಕ್ ಹಾಗೂ ಸ್ಯಾನಿಟೈಸರ್ ಕಡ್ಡಾಯ ಬಳಕೆ .
* ಕೆಮ್ಮುವಾಗ, ಸೀನುವಾಗ ಕರವಸ್ತ್ರ ಬಳಸಬೇಕು, ಎಲ್ಲೆಂದರಲ್ಲಿ ಉಗುಳಬಾರದು.
* ಕಾಲೇಜು ಆರಂಭಕ್ಕೆ ಮುನ್ನ ಇಡೀ ಆವರಣ ಹಾಗೂ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು.
* ಕೋವಿಡ್ ಸೋಂಕಿತರಿಗೆ ಬಳಸಿದ ಕಟ್ಟಡಗಳನ್ನು ಎರೆಡೆರಡು ಬಾರಿ ಸ್ಯಾನಿಟೈಸ್ ಮಾಡಬೇಕು.
* ಸಾಮೂಹಿಕ ಪ್ರಾರ್ಥನೆ, ಕ್ರೀಡೆ ಎಲ್ಲಾ ಚಟುವಟಿಕೆಗಳಿಗೆ ಕೋವಿಡ್ ನಿಯಮ ಕಡ್ಡಾಯ.
* ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನರ್ ಹಾಗೂ ಸ್ಯಾನಿಟೈಸರ್ ಕಡ್ಡಾಯವಾಗಿ ಇರಬೇಕು.
ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 1365 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಇದೇ ವೇಳೆ 1,558 ಸೋಂಕಿತರು ಬಿಡುಗಡೆಯಾಗಿ, ರಾಜ್ಯಾದ್ಯಂತ 22 ಜನರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ 21,266 ಸಕ್ರಿಯ ಕೊರೊನಾ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇ.0.76ರಷ್ಟಿದೆ. ಇನ್ನು ಬೆಂಗಳೂರಲ್ಲಿ ಇಂದು 327 ಹೊಸ ಕೋವಿಡ್ ಪ್ರಕರಣ ದಾಖಲಾಗಿದ್ದರೆ, ಸಕ್ರಿಯ ಪ್ರಕರಣ 7,920 ಇವೆ.


Share this Story:

Follow Webdunia kannada

ಮುಂದಿನ ಸುದ್ದಿ

ನಿದ್ದೆಗಣ್ಣಲ್ಲಿ ಆಸಿಡ್ ಕುಡಿದು ಯುವಕ ಸಾವು