ಬಿಬಿಎಂಪಿ ಚುನಾವಣೆ ನಡೆಸುವ ಸಂಬಂಧ ಇಂದು ಸುಪ್ರೀಂ ಕೋರ್ಟ್ನಲ್ಲಿ ಮಹತ್ವದ ವಿಚಾರಣೆ ನಡೆದಿದ್ದು, ಇನ್ನು 1 ವಾರದೊಳಗೆ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಬೇಕು. ಸರ್ಕಾರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದ ಕೂಡಲೆ ಚುನಾವಣಾ ಆಯೋಗ ಬಿಬಿಎಂಪಿ ಚುನಾವಣೆ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಎಂ ಕಾನ್ವಿಲ್ಕರ್ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಸಲಾಗಿದ್ದು, ದೆಹಲಿ, ಮಹಾರಾಷ್ಟ್ರ ಕೇಸ್ ಗಳ ಜೊತೆ ಕರ್ನಾಟಕದ ಪ್ರಕರಣದ ವಿಚಾರಣೆ ನಡೆಸಲಾಗಿದೆ. ಸದ್ಯ ವಾರ್ಡ್ಗಳ ಪುನರ್ ವಿಂಗಡನೆಯಾದರೂ ಮೀಸಲಾತಿ ಹೊರಡಿಸಿಲ್ಲ. ಮುಂದಿನ ಒಂದು ವಾರದೊಳಗೆ ಮೀಸಲಾತಿ ಪಟ್ಟಿ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮೀಸಲಾತಿ ಬೆನ್ನಲ್ಲೇ ಚುನಾವಣೆಯನ್ನು ಘೋಷಣೆ ಮಾಡಲು ಚುನಾವಣಾ ಆಯೋಗಕ್ಕೆ ಸೂಚನೆ ನೀಡಲಾಗಿದೆ.