Select Your Language

Notifications

webdunia
webdunia
webdunia
webdunia

ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭ

ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭ
bengaluru , ಬುಧವಾರ, 18 ಆಗಸ್ಟ್ 2021 (20:02 IST)
ನಾಳೆಯಿಂದ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ವೇಳೆ ಕೊರೊನಾ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿ ಜಾರಿಗೊಳಿಸಲು ಪಿಯು ಮಂಡಳಿ
ಸಿದ್ಧತೆ ನಡೆಸಿದೆ.
ಈ ಬಾರಿ 18 ಸಾವಿರದ 414 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 17,469 ಖಾಸಗಿ ವಿದ್ಯಾರ್ಥಿಗಳು, 352 ರಿಪೀಟರ್ಸ್, 5093 ಫ್ರೆಷರ್ಸ್ ವಿದ್ಯಾರ್ಥಿಗಳು ಇದ್ದಾರೆ.
19 ಆಗಸ್ಟ್ ನಿಂದ ಸೆಪ್ಟೆಂಬರ್ 3 ರವರೆಗೆ ಪರೀಕ್ಷೆ ಜರುಗಲಿದೆ. ರಾಜ್ಯದ 187 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯುತ್ತೆ. ಕೋವಿಡ್ ಸೋಂಕು ಇದ್ರೆ ಕೂಡಲೇ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಕೋವಿಡ್ ಸೋಂಕಿತರಿಗೂ ಪರೀಕ್ಷೆ ಬರೆಯಲು ಅವಕಾಶ ಇರುತ್ತೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳು ಆರ್ ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಲಾಗಿದೆ. ಕೇರಳ ಗಡಿ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳು ಕೂಡ ಆರ್ ಟಿಪಿಸಿಆರ್ 72 ಗಂಟೆಗಳ ನೆಗೆಟಿವ್ ರಿಪೋರ್ಟ್ ತೋರಿಸಬೇಕಾಗಿದೆ.
ಪರೀಕ್ಷಾ ಕೊಠಡಿಯಲ್ಲಿ ಹತ್ತು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದ್ದು, ಡೆಸ್ಕ್ ಗೆ ಒಬ್ಬರಿಗೆ ಪರೀಕ್ಷೆ ಬರೆಯುವ ಅವಕಾಶ ಇದೆ. ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಹತ್ವದ ಶಿಕ್ಷಣ ಇಲಾಖೆಯಿಂದ ಮಹತ್ವದ ಸುದ್ದಿ!