Publish Date: Fri, 17 Jan 2020 (15:01 IST)
Updated Date: Fri, 17 Jan 2020 (15:05 IST)
85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಗೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ.
ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ಮಾಣಕ್ಕೆ ಪೂಜೆ ಸಲ್ಲಿಸಲಾಯಿತು.
ಶಾಸಕರಾದ ಎಂ.ವೈ.ಪಾಟೀಲ, ಬಸವರಾಜ ಮತ್ತಿಮಡು, ದತ್ತಾತ್ರೇಯ ಪಾಟೀಲ ರೇವೂರ, ಅವಿನಾಶ್ ಜಾಧವ, ಖನೀಜ್ ಫಾತೀಮಾ, ಎಂಎಲ್ಸಿ ಗಳಾದ ಬಿ.ಜಿ.ಪಾಟೀಲ, ತಿಪ್ಪಣ್ಣಪ್ಪ ಕಮನಕೂರ, ಜಿಪಂ ಉಪಾಧ್ಯಕ್ಷೆ ಶೋಭಾ, ಜಿಲ್ಲಾಧಿಕಾರಿ ಶರತ್ ಬಿ., ಸಿಇಒ ಡಾ.ರಾಜಾ ಪಿ., ಬಿಜೆಪಿ ಮುಖಂಡ ದೊಡ್ಡಪ್ಪಗೌಡ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ದಕ್ಷಿಣಾಭಿಮುಖವಾಗಿ ಸಮ್ಮೇಳನದ ಮುಖ್ಯ ವೇದಿಕೆ ನಿರ್ಮಿಸಲಾಗುತ್ತಿದ್ದು, 35 ಎಕರೆ ಜಾಗದಲ್ಲಿ ಸಂಪೂರ್ಣ ಸಮ್ಮೇಳನ ವ್ಯವಸ್ಥೆ ಮಾಡಲಾಗುತ್ತಿದೆ.