ಚಿಕ್ಕೋಡಿ : ಹೃದಯಾಘಾತದಿಂದ ಸಾವನ್ನಪ್ಪಿದ ಉಮೇಶ್ ಕತ್ತಿ ಸಮಾಧಿಗೆ ಕುಟುಂಬಸ್ಥರು ಪೂಜೆ ನೆರವೇರಿಸಿ ಅಂತಿಮ ವಿಧಿ ವಿಧಾನವನ್ನು ಇಂದು ಪೂರೈಸಿದರು.
ನಿನ್ನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ಗದ್ದೆಯಲ್ಲಿ ತಂದೆ ತಾಯಿ ಸಮಾಧಿ ಪಕ್ಕವೇ ಅವರ ಅಂತ್ಯಕ್ರಿಯೆ ನಡೆದಿತ್ತು. ಸಮಾಧಿಗೆ ತೆರಳಿ ಪುತ್ರ ನಿಖಿಲ್ ಕತ್ತಿ, ಅಳಿಯ ನಿತಿನ್ ಪ್ರಭುದೇವ ಅವರು ಪುರೋಹಿತರ ಮಾರ್ಗದರ್ಶನದಂತೆ ಪೂಜೆ ಸಲ್ಲಿಸಿದರು.
ಸಮಾಧಿಗೆ ಪೂಜೆ ಮಾಡಿ ಸಮಾಧಿಯ ಮೇಲೆ ಅವರಿಷ್ಟದ ತಿಂಡಿ, ತಿನಿಸುಗಳನ್ನು ಇಡಲಾಯಿತು. ಜೊತೆಗೆ ಸಮಾಧಿ ಮೇಲೆ ಅವರಿಗೆ ಇಷ್ಟವಾದ ಗುಟ್ಕಾ ಪ್ಯಾಕೇಟ್ ಇಟ್ಟು ನಮನ ಸಲ್ಲಿಸಲಾಯಿತು. ಇಂದು ಕೂಡ ಅವರ ಮನೆಗೆ ಅಭಿಮಾನಿಗಳು ದಂಡೇ ಹರಿದು ಬರುತ್ತಿದೆ.