Publish Date: Mon, 12 Nov 2018 (13:26 IST)
Updated Date: Mon, 12 Nov 2018 (13:29 IST)
ಬೆಂಗಳೂರು : ಕೇಂದ್ರ ಸಚಿವ ಅನಂತ್ ಕುಮಾರ್ ಅವರು ನಿಧರಾದ ಹಿನ್ನಲೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಅಂತಿಮ ದರ್ಶನ ಪಡೆದಿದ್ದಾರೆ.
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ ಎಚ್.ಎನ್. ಅನಂತಕುಮಾರ್ (59) ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅವರ ಸಾವಿನ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪುನೀತ್, ಅವರ ಅಂತಿಮ ದರ್ಶನ ಪಡೆದು, ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.