Webdunia - Bharat's app for daily news and videos

Install App

ನವೆಂಬರ್​​​ 16ಕ್ಕೆ ‘ಪುನೀತ್​ ನಮನ’ ಕಾರ್ಯಕ್ರಮ

Webdunia
ಬುಧವಾರ, 3 ನವೆಂಬರ್ 2021 (20:53 IST)
ಬೆಂಗಳೂರು:  ದಿವಂಗತ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಅಗಲಿಕೆಯ ನೋವನ್ನು ಚಿತ್ರರಂಗ ತಡೆದುಕೊಳ್ಳಲು ಆಗುತ್ತಿಲ್ಲ ಈ ನಡುವೆಯೂ ಕರ್ನಾಟಕ ವಾಣಿಜ್ಯ  ಮಂಡಳಿ ಹಾಗೂ ನಿರ್ಮಾಪಕರ ಸಂಘ ಜಂಟಿಯಾಗಿ ಪುನೀತ್ ನಮನ ಎನ್ನುವ  ಕಾರ್ಯಕ್ರಮವನ್ನು ನೆಡೆಸಿಕೊಡಲು ಮುಂದಾಗಿದೆ. 
 
ದಿವಂಗತ ನಟ ಪುನೀತ್ ರಾಜ್ ಕುಮಾರ್ ಕನ್ನಡ ಚಿತ್ರಕ್ಕೆ ಅಪಾರ ಕೊಡುಗೆಗಳನ್ನು ನೀಡಿದ್ದಾರೆ. ಅವರ ಅಕಾಲಿಕ ಮರಣವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ  ಹಿನ್ನೆಲೆಯಲ್ಲಿ ನವೆಂಬರ್​​​ 16ಕ್ಕೆ ‘ಪುನೀತ್​ ನಮನ’ ಎನ್ನುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸಿದ್ಧತೆ ನಡೆಸಿದ್ದಾರೆ. ಈ  ಕಾರ್ಯಕ್ರಮ ಪ್ಯಾಲೆಸ್ ಗ್ರೌಂಡ್ ನ ಒಳಾಂಗಣ ವೇದಿಕೆಯಲ್ಲಿ ನಡೆಯಲಿದೆ ಎಂದು ವಾಣಿಜ್ಯ ಮಂಡಳಿಯ ಮೂಲಗಳು ತಿಳಿಸಿವೆ. 
 
ಬೃಹತ್​​ ಮಟ್ಟದಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದು, ಈಗಾಗಲೇ ವಾಣಿಜ್ಯ ಮಂಡಳಿ ಆಹ್ವಾನ ಪತ್ರಿಕೆ ನೀಡಲು ತಯಾರಿ ನೆಡೆಸಿದೆ. ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.​ವೈ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಸೇರಿ ಹಲವರಿಗೆ ಆಮಂತ್ರಣ ನೀಡಲಿದೆ.  ದಕ್ಷಿಣ ಭಾರತದ  ಕಲಾವಿದರು, ತಂತ್ರಜ್ಞರಿಗೂ ಆಹ್ವಾನ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಆಂಧ್ರ ಹಾಗೂ ತಮಿಳುನಾಡಿನ ಫಿಲ್ಮ್ ಚೇಂಬರ್ ಪದಾಧಿಕಾರಿಗಳು, ಕಲಾವಿದರು ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments