Publish Date: Thu, 31 Oct 2019 (09:01 IST)
Updated Date: Thu, 31 Oct 2019 (09:03 IST)
ರಾಮನಗರ : ಎಲ್ಲ ವಿಧಾನ ಪರಿಷತ್ ಸದಸ್ಯರೂ ಜೆಡಿಎಸ್ ಪಕ್ಷ ಬಿಡುವ ಬಗ್ಗೆ ಚಿಂತನೆ ಮಾಡುತ್ತಿದ್ದಾರೆ ಎಂದು ಹೇಳುವುದರ ಮೂಲಕ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಜೆಡಿಎಸ್ ಪಕ್ಷಕ್ಕೆ ಶಾಕ್ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ನಾನು ಜೆಡಿಎಸ್ ಪಕ್ಷ ಬಿಡಲು ತೀರ್ಮಾನಿಸಿದ್ದೇನೆ. ಮುಂದಿನ ನಡೆಯ ಬಗ್ಗೆ ತೀರ್ಮಾನಿಸಿಲ್ಲ. 2-3 ಜನ ಹೊರತುಪಡಿಸಿ ಉಳಿದೆಲ್ಲ ಪರಿಷತ್ ಸದಸ್ಯರು ಪಕ್ಷ ಬಿಡುವ ಬಗ್ಗೆ ಆಲೋಚನೆ ಮಾಡುತ್ತಿದ್ದಾರೆ. ಎಲ್ಲರೂ ಸೇರಿ ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ನಾನು ಜೆಡಿಎಸ್ ಪಕ್ಷ ಬಿಡುವ ಮೊದಲು ನನ್ನ ಶ್ರೇಯಸ್ಸಿನ ಹಿಂದೆ ನಿಂತಿರುವ ನನ್ನ ಶಿಕ್ಷಕರು ಹಾಗೂ ಸ್ನೇಹಿತರ ಜೊತೆ ಚರ್ಚೆ ಮಾಡಬೇಕು. ಹೀಗಾಗಿ ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷ ಬಿಡಲು ಕಾರಣ ತಿಳಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.