Publish Date: Tue, 30 Oct 2018 (19:25 IST)
Updated Date: Tue, 30 Oct 2018 (19:26 IST)
ರೈತ ನಾಯಕ, ಮಾಜಿ ಶಾಸಕ ದಿವಂಗತ ಕೆ.ಎಸ್.ಪುಟ್ಟಣ್ಣಯ್ಯ ನಿವಾಸಕ್ಕೆ ಜೆಡಿಎಸ್- ಕಾಂಗ್ರೆಸ್ ಪ್ರಮುಖರು ಭೇಟಿ ನೀಡಿದರು.
ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾದ ಎಲ್.ಆರ್.ಶಿವರಾಮೇಗೌಡ, ಮಾಜಿ ಸಚಿವರಾದ ಮಹಾದೇವಪ್ಪ, ಟಿ.ಬಿ.ಜಯಚಂದ್ರ ಭೇಟಿ ನೀಡಿದರು. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕ್ಯಾತನಹಳ್ಳಿಯಲ್ಲಿರುವ ಪುಟ್ಟಣ್ಣಯ್ಯ ನಿವಾಸಕ್ಕೆ ಭೇಟಿ ನೀಡಿದರು.
ಚುನಾವಣೆಯಲ್ಲಿ ಮೈತ್ರಿ ಕೂಟಕ್ಕೆ ಸಹಾಯ ಮಾಡುವಂತೆ ಮನವಿ ಮಾಡಿದರು.
ಜಿಲ್ಲೆಯಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಮತ ಬ್ಯಾಂಕ್ ಹೊಂದಿರುವ ರೈತ ಸಂಘದ ಸದಸ್ಯರಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಪುಟ್ಟಣ್ಣಯ್ಯ ಗೆ ಗೌರವ ಸಲ್ಲಿಸಲು ನಿಮ್ಮ ಪುತ್ರ ದರ್ಶನ್ ಗೆ ಅವಕಾಶ ಕಲ್ಪಸಿದ್ಧೆವು. ಈ ಬಾರಿ ಜೆಡಿಎಸ್ ಬೆಂಬಲಿಸಿ ಎಂದು ಪುಟ್ಟಣ್ಣಯ್ಯ ಪತ್ನಿ ಸುನೀತಾಗೆ ಕಾಂಗ್ರೆಸ್ ಮುಖಂಡರು ಮನವಿ ಮಾಡಿದರು.