Publish Date: Sun, 05 Jul 2020 (10:15 IST)
Updated Date: Sun, 05 Jul 2020 (10:17 IST)
ವಿಜಯಪುರ : ಕ್ಯಾಂಟರ್, ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಚಿಕ್ಕಸಿಂದಗಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ಚಿಕ್ಕಸಿಂದಗಿ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ವೇಗವಾಗಿ ಬರುತ್ತಿದ್ದ ಕ್ಯಾಂಟರ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಇದರ ಪರಿಣಾಮ ಕ್ಯಾಂಟರ್ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಲಾರಿ ಚಾಲಕ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.