ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ರಾಜ್ಯಕ್ಕೆ ಆತಂಕ ತಂದೊಡ್ಡಿದ್ದು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ವಿದೇಶಗಳಿಂದ ಆಗಮಿಸುತ್ತಿರುವ ಪ್ರಯಾಣಿಕರನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಾಗುತ್ತಿದೆ.ಹೈ ರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರ ವ್ಯಾಕ್ಸಿನ್ ಹಾಗೂ ನೆಗೆಟಿವ್ ವರದಿ ಕಡ್ಡಾಯವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ನೆಗೆಟಿವ್ ರಿಪೋರ್ಟ್ ಇದ್ದರೂ ಕೂಡ ಮತ್ತೊಮ್ಮೆ ಆರ್ ಟಿ ಪಿಸಿ ಆರ್ ಟೆಸ್ಟ್ ಮಾಡಲಾಗುತ್ತಿದೆ.
ಟೆಸ್ಟಿಂಗ್ ನಂತರ 7 ದಿನಗಳ ಹೋಂ ಕ್ವಾರಂಟೈನ್ ಮಾಡಲಾಗುತ್ತದೆ. 7 ದಿನಗಳ ಬಳಿಕ ಒಂದು ವೇಳೆ ಪಾಸಿಟಿವ್ ಬಂದರೆ ನಿಗದಿತ ಆಸ್ಪತ್ರೆಗಳಲ್ಲಿ ಅವರನ್ನು ಐಸೋಲೇಷನ್ ಮಾಡಲಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಡಿಹೆಚ್ ಒ ತಿಪ್ಪೇಸ್ವಾಮಿ ತಿಳಿಸಿದ್ದಾರೆ.