Select Your Language

Notifications

webdunia
webdunia
webdunia
webdunia

ಹೈ.ಕ. ಜಿಲ್ಲೆಗಳ ಅಭಿವೃದ್ಧಿ ಚರ್ಚೆಗಾಗಿ ಶೀಘ್ರವೇ ಸಭೆ

ಹೈ.ಕ. ಜಿಲ್ಲೆಗಳ ಅಭಿವೃದ್ಧಿ ಚರ್ಚೆಗಾಗಿ ಶೀಘ್ರವೇ ಸಭೆ
ಕಲಬುರಗಿ , ಶುಕ್ರವಾರ, 12 ಅಕ್ಟೋಬರ್ 2018 (19:22 IST)
ಹೈ.ಕ. ಪ್ರದೇಶದ ಆರು ಜಿಲ್ಲೆಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಶೀಘ್ರದಲ್ಲಿ ಆರು ಜಿಲ್ಲೆಗಳ ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರ ಸಭೆ ಕರೆದು ಚರ್ಚಿಸಲಾಗುವುದು ಎಂದು ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ನೂತನ ಅಧ್ಯಕ್ಷ ತಿಳಿಸಿದ್ದಾರೆ.

ಕಲಬುರಗಿಯ ಹೆಚ್.ಕೆ.ಆರ್.ಡಿ.ಬಿ. ಕಚೇರಿಯಲ್ಲಿ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ರಾಜಶೇಖರ ಬಿ. ಪಾಟೀಲ ಅಧಿಕಾರ ಸ್ವೀಕರಿಸಿದ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. 2018-19ನೇ ಸಾಲಿನ ಕ್ರಿಯಾ ಯೋಜನೆ ರೂಪಿಸಲು ಎಲ್ಲ ಜಿಲ್ಲೆಗಳಿಗೆ ಮಂಡಳಿಯಿಂದ ತಿಳಿಸಲಾಗಿದೆ. ಬೀದರ, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಕ್ರಿಯಾ ಯೋಜನೆಗಳು ಸಲ್ಲಿಕೆಗೆ ಬಾಕಿಯಿದ್ದು, ಆದಷ್ಟು ಬೇಗ ಕ್ರಿಯಾ ಯೋಜನೆಗಳನ್ನು ಪಡೆದು ಅನುಮೋದನೆ ನೀಡಲಾಗುವುದು ಎಂದು ತಿಳಿಸಿದರು.

ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ವ್ಯವಸ್ಥೆಯನ್ನು ಬದಲಾಯಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. ಮಂಡಳಿಯ ಕಾರ್ಯದರ್ಶಿಗಳೊಂದಿಗೆ ಸಂಪೂರ್ಣ ಚರ್ಚೆ ನಡೆಸಿ ಕ್ರಮ ಜರುಗಿಸಲಾಗುವುದು. ಮಂಡಳಿಯಲ್ಲಿ ಒಟ್ಟು 83 ಮಂಜೂರಾದ ಹುದ್ದೆಗಳಿದ್ದು, ಕೇವಲ 46 ಹುದ್ದೆಗಳು ಭರ್ತಿಯಾಗಿವೆ. ಇನ್ನುಳಿದ 37 ಹುದ್ದೆಗಳ ಕೊರತೆಯಿಂದಾಗಿ ಮಂಡಳಿಯಿಂದ ಕೈಗೊಳ್ಳಬೇಕಾದ ಕಾಮಗಾರಿಗಳು ನಿಧಾನವಾಗಿ ಸಾಗುತ್ತಿವೆ. ಮಂಡಳಿಯಲ್ಲಿ ಕೆಲವು ಸಮಸ್ಯೆಗಳಿದ್ದು, ಅವುಗಳನ್ನು ಬಗೆಹರಿಸಿ ಹೆಚ್ಚಿನ ಪ್ರಮಾಣದಲ್ಲಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ 2013-14 ರಿಂದ ಇಲ್ಲಿಯವರೆಗೆ ಒಟ್ಟು 2928.97 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಈ ಅವಧಿಯಲ್ಲಿ 13623 ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ಪೈಕಿ 8462 ಕಾಮಗಾರಿಗಳು ಪೂರ್ಣಗೊಂಡು 3409 ಕಾಮಗಾರಿಗಳು ಪ್ರಗತಿಯಲ್ಲಿವೆ. 1752 ಕಾಮಗಾರಿಗಳು ಪ್ರಾರಂಭಿಸಬೇಕಾಗಿದೆ. 371(ಜೆ) ಅಡಿಯಲ್ಲಿ ನೂತನವಾಗಿ ಹೆಚ್.ಕೆ.ಅರ್.ಡಿ.ಬಿ. ರಚಿತವಾದ ನಂತರ ಹೈ.ಕ. ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ನಂಜುಂಡಪ್ಪ ವರದಿಗೆ ಅನುಸಾರವಾಗಿ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಒತ್ತು  ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಗುಣಮಟ್ಟದ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗಾಗಿ ಪೂರ್ಣಗೊಳಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.



Share this Story:

Follow Webdunia kannada

ಮುಂದಿನ ಸುದ್ದಿ

ಲೋಕಸಭಾ ಉಪ ಚುನಾವಣೆ: ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ