ಬೆಂಗಳೂರು: ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಸುಲಿಗೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಈಗ ಬಸ್ ದರ 15% ಏರಿಕೆ ಮಾಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ನವರೇ, ದಿನಬೆಳಗಾದರೆ ಒಂದಲ್ಲ ಒಂದು ಬೆಲೆ ಏರಿಕೆ ಮಾಡಿ ಕನ್ನಡಿಗರ ರಕ್ತ ಹೀರುತ್ತಿದ್ದೀರಲ್ಲ ನಿಮ್ಮ ಸರ್ಕಾರದ ಬಕಾಸುರ ಹೊಟ್ಟೆ ತುಂಬಿಸಲು ಕನ್ನಡಿಗರು ಇನ್ನೆಷ್ಟು ತೆರಿಗೆ, ಶುಲ್ಕ ತೆತ್ತಬೇಕು ಎಂದಿದ್ದಾರೆ.
ಅಸಮರ್ಥ ಸಿಎಂ ಸಿದ್ದರಾಮಯ್ಯ ಅವರ ದುರಾಡಳಿತದಲ್ಲಿ:
⬆️ಪೆಟ್ರೋಲ್ ಡೀಸೆಲ್ ದರ ಏರಿಕೆ ಅನಿವಾರ್ಯ
⬆️ಆಸ್ತಿ ತೆರಿಗೆ ಏರಿಕೆ ಅನಿವಾರ್ಯ
⬆️ಮುದ್ರಾಂಕ ದರ ಏರಿಕೆ ಅನಿವಾರ್ಯ
⬆️ನೀರಿನ ದರ ಏರಿಕೆ ಅನಿವಾರ್ಯ
⬆️ಜನನ ಮರಣ ಪ್ರಮಾಣಪತ್ರ ಶುಲ್ಕ ಏರಿಕೆ ಅನಿವಾರ್ಯ
⬆️ಹಾಲಿನ ದರ ಏರಿಕೆ ಅನಿವಾರ್ಯ
⬆️ ಬಸ್ ದರ ಏರಿಕೆ ಅನಿವಾರ್ಯ
ಶೀಘ್ರದಲ್ಲೇ ಕನ್ನಡಿಗರು ಕಾಂಗ್ರೆಸ್ ಸರ್ಕಾರದ ವಿರುದ್ಧ ದಂಗೆ ಏಳುವುದೂ ಅನಿವಾರ್ಯ.<>