Publish Date: Wed, 27 Dec 2017 (17:04 IST)
Updated Date: Wed, 27 Dec 2017 (17:07 IST)
ಮಹಾದಾಯಿ ವಿವಾದದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆ ನಡೆಸುವಾಗ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಗಾಯಗೊಂಡಿದ್ದಾರೆ.
ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದರು. ಪೊಲೀಸರು ವಶಕ್ಕೆ ಪಡೆಯುವ ವೇಳೆ ಅಶೋಕ್ ತಲೆಗೆ ಬ್ಯಾರಿಕೇಡ್ ತಗುಲಿದ್ದರಿಂದ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ನಂತರ ಆರ್.ಅಶೋಕ್ ಅವರು ಮಲ್ಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.