Select Your Language

Notifications

webdunia
webdunia
webdunia
webdunia

ಮುಡಾ ಹಗರಣದಲ್ಲಿರುವ ಆರೋಪಿಗಳ ಪಾಸ್‌ಪೋರ್ಟ್‌ ರದ್ದು ಮಾಡಲು ಆರ್‌.ಅಶೋಕ್ ಒತ್ತಾಯ

MUDA Scam, Opposition Leader R Ashok, Chief Minister Siddaramaiah

Sampriya

ಬೆಂಗಳೂರು , ಶನಿವಾರ, 19 ಅಕ್ಟೋಬರ್ 2024 (18:17 IST)
ಬೆಂಗಳೂರು: ಮೂಡಾದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನ ಜಾರಿ ನಿರ್ದೇಶನಾಲಯ ತನಿಖೆ ಮಾಡುತ್ತಿದೆ. ಈ ನಿಟ್ಟಿನಲ್ಲಿ ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯ ದೃಷ್ಟಿಯಿಂದ, ಈ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು, ಆರೋಪಿಗಳು ಹಾಗೂ ಸಂಭವನೀಯ ಸಾಕ್ಷಿದರರ ಪಾಸ್ ಪೋರ್ಟ್ ಗಳನ್ನು ಈ ಕೂಡಲೇ ಮುಟ್ಟುಗೋಲು ಹಾಕಬೇಕೆಂದು ವಿಪಕ್ಷ ನಾಯಕ ಆರ್‌ ಅಶೋಕ್ ಒತ್ತಾಯ ಮಾಡಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಪೋಸ್ಟ್ ಹಾಕಿಕೊಂಡಿದ್ದಾರೆ.  ಮೂಡಾದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನ ಜಾರಿ ನಿರ್ದೇಶನಾಲಯ ತನಿಖೆ ಮಾಡುತ್ತಿದೆ. ಇ.ಡಿ. ಅಧಿಕಾರಿಗಳು ಮೈಸೂರಿನ ಮೂಡಾ ಕಚೇರಿಗೆ, ತಾಲ್ಲೂಕು ಕಚೇರಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನಾ ಕಾರ್ಯ ನಡೆಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.

ಇಡಿ ತನಿಖೆ ಇಷ್ಟೊಂದು ಚುರುಕುಗೊಂಡಿರುವ ಪರಿಸ್ಥಿತಿಯಲ್ಲಿ ಇಡೀ ಪ್ರಕರಣ ಮತ್ತೊಂದು ಮಜಲು ತಲುಪಿದಂತಾಗಿದೆ. ಅಧಿಕಾರದ ಅತ್ಯುನ್ನತ ಸ್ಥಾನದಲ್ಲಿರುವವರು, ಅವರ ಕುಟುಂಬ ಸದಸ್ಯರು, ಹಿರಿಯ ಅಧಿಕಾರಿಗಳು ಈ ಪ್ರಕರಣದಲ್ಲಿ ಆರೋಪಿಗಳಾಗಿರುವುದರಿಂದ, ಈ ಪ್ರಕರಣ ಎಷ್ಟು ಗಂಭೀರವೋ ಅಷ್ಟೆ ಸೂಕ್ಷ್ಮವೂ ಆಗಿದೆ.

ಈ ನಿಟ್ಟಿನಲ್ಲಿ, ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯ ದೃಷ್ಟಿಯಿಂದ, ಈ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು, ಆರೋಪಿಗಳು ಹಾಗೂ ಸಂಭವನೀಯ ಸಾಕ್ಷಿದರರ ಪಾಸ್ ಪೋರ್ಟ್ ಗಳನ್ನು ಈ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು @dir_ed ಹಾಗು @DgpKarnataka
 ಅವರಲ್ಲಿ ಮನವಿ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಫಿಟ್ಸ್ ಬಂದ ಬೈಕ್ ಸವಾರನಿಗೆ ಡಾ ಮಂಜುನಾಥ್ ಏನು ಮಾಡಿದ್ರು ನೋಡಿ (Video)