ಮತ್ತೊಮ್ಮೆ ಸೋತ ರಾಹುಲ್ ಗಾಂಧಿಗೆ ಅಭಿನಂದನೆ, ಕರ್ನಾಟಕದಲ್ಲೂ ಹೀಗೇ ಆಗುತ್ತೆ: ಆರ್ ಅಶೋಕ್

Krishnaveni K
ಶುಕ್ರವಾರ, 14 ನವೆಂಬರ್ 2025 (12:07 IST)
ಬೆಂಗಳೂರು: ಸೋಲಿನ ಶತಕದೆಡೆಗೆ ಹೆಜ್ಜೆ ಹಾಕುತ್ತಿರುವ ರಾಹುಲ್ ಗಾಂಧಿಗೆ ಅಭಿನಂದನೆಗಳು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಟಾಂಗ್ ಕೊಟ್ಟಿದ್ದಾರೆ.
 

ಬಿಹಾರ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಭಾರೀ ಮುನ್ನಡೆಯಾಗಿದ್ದು, ಕಾಂಗ್ರೆಸ್, ಆರ್ ಜೆಡಿ ನೇತೃತ್ವದ ಮಹಾಘಟಬಂಧನ ಭಾರೀ ಸೋಲಿನತ್ತ ಸಾಗಿದೆ. ಇದರ ಬೆನ್ನಲ್ಲೇ ಆರ್ ಅಶೋಕ್ ರಾಹುಲ್ ಗಾಂಧಿಗೆ ಟಾಂಗ್ ಕೊಟ್ಟಿದ್ದಾರೆ.

‘ಸೋಲಿನ ಶತಕದೆಡೆಗೆ ಹೆಜ್ಜೆ ಹಾಕುತ್ತಿರುವ ರಾಹುಲ್ ಗಾಂಧಿ ಅವರಿಗೆ ಅಭಿನಂದನೆಗಳು! ಆಕಾಶದಲ್ಲಿರುವ ನಕ್ಷತ್ರಗಳನ್ನು ಎಣಿಸಿಬಿಡಬಹುದೇನೋ ಆದರೆ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷವನ್ನ ಎಷ್ಟು ಚುನಾವಣೆಗಳಲ್ಲಿ ಸೋಲಿಸಿದ್ದಾರೆ ಎನ್ನುವುದನ್ನು ಲೆಕ್ಕ ಮಾಡುವುದು ಕಷ್ಟ.

ಸುಶಾಸನ, ಭ್ರಷ್ಟಾಚಾರ ಮುಕ್ತ ಆಡಳಿತ, ಅಭಿವೃದ್ಧಿ ರಾಜಕಾರಣದಿಂದಾಗಿ ಜನಮನ್ನಣೆ ಗಳಿಸಿರುವ ಸನ್ಮಾನ್ಯ ಶ್ರೀ ನಿತೀಶ್ ಕುಮಾರ್ ಅವರ ನೇತೃತ್ವದ ಎನ್ ಡಿಎ ಸರ್ಕಾರದ ಮುಂದೆ ಜಂಗಲ್ ರಾಜ್ ಕುಖ್ಯಾತಿಯ ಆರ್ ಜೆಡಿ - ಕಾಂಗ್ರೆಸ್ ಮಹಾಘಟಬಂಧನ ಗೆಲ್ಲಲು ಸಾಧ್ಯವೇ ಇಲ್ಲ ಎಂದು ಕಾಂಗ್ರೆಸ್ ಪಕ್ಕಕ್ಕೆ ಚೆನ್ನಾಗಿ ಗೊತ್ತಿತ್ತು. ಆದ್ದರಿಂದಲೇ ರಾಹುಲ್ ಗಾಂಧಿ ಅವರು ಮುಖಭಂಗ ತಪ್ಪಿಸಿಕೊಳ್ಳಲು ವೋಟ್ ಚೋರಿ ಎಂಬ ಕಟ್ಟುಕಥೆ ಮೂಲಕ ಜನರನ್ನ ದಿಕ್ಕು ತಪ್ಪಿಸಲು ಹೊರಟಿದ್ದು.

ಆದರೆ ಬಿಹಾರದ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ಅವರ "ವೋಟ್ ಚೋರಿ" ಪ್ರಹಸನವ್ನ ಸಾರಾಸಗಟಾಗಿ ತಿರಸ್ಕರಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಹಾಗು ಶ್ರೀ ನಿತೀಶ್ ಕುಮಾರ್ ಅವರ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಮತ್ತೊಮ್ಮೆ ಸ್ಪಷ್ಟ ಜನಾದೇಶ ನೀಡಿದ್ದಾರೆ.

ಹರಿಯಾಣ, ಮಹಾರಾಷ್ಟ್ರ, ಬಿಹಾರದಲ್ಲಿ ಬಂದಿರುವ ಸ್ಥಿತಿಯೇ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲೂ ಬರುವ ದಿನ ಬಹಳ ದೂರವಿಲ್ಲ. ಈಗಾಗಲೇ ಜನಮನ್ನಣೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲೂ ಧೂಳೀಪಟ ಆಗುವುದು ನೂರಕ್ಕೆ ನೂರು ಗ್ಯಾರೆಂಟಿ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಣಿ ಚನ್ನಮ್ಮ ಮೃಗಾಲಯದಲ್ಲಿ ಇದೆಂಥಾ ಘಟನೆ, ಕೃಷ್ಣಮೃಗಗಳಿಗೆ ಆಗಿದ್ದದಾರೇನು

ಮತಗಳ್ಳತನ ಚುನಾವಣೆ ತಂತ್ರ, ರಾಹುಲ್ ಗಾಂಧಿ ವಿದೇಶದಲ್ಲಿ ಕಾಫಿ ಕುಡಿಯುತ್ತಿದ್ದರು: ಯದುವೀರ್ ಒಡೆಯರ್

ಜಮ್ಮು ಕಾಶ್ಮೀರದ ನೌಗಮ್ ಠಾಣೆಯಲ್ಲಿ ಸ್ಫೋಟ, ಆಗಿದ್ದೇನು ಗೊತ್ತಾ

ಬಿಜೆಪಿ ಗೆದ್ದರೆ ಮತಗಳ್ಳತನ, ಕಾಂಗ್ರೆಸ್ ಗೆದ್ದರೆ ಎಲ್ಲಾ ಚೆನ್ನಾಗಿರುತ್ತಾ: ಶೋಭಾ ಕರಂದ್ಲಾಜೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments