Publish Date: Thu, 02 Jul 2026 (17:44 IST)
Updated Date: Thu, 02 Jul 2026 (17:46 IST)
ಬೆಂಗಳೂರು: ಮಾದಪಟ್ಟಣ ಕಲ್ಲು ಕ್ವಾರಿ ದುರಂತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರನ್ನು ಭೇಟಿ ಮಾಡಿದ ವಿಪಕ್ಷ ನಾಯಕ ಆರ್ ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಇಂದು ಬೆಂಗಳೂರಿನ ಸಮೀಪ ಕಲ್ಲು ಕ್ವಾರಿಯಲ್ಲಿ ಬಂಡೆ ಜಾರಿ ದುರಂತ ಸಂಭವಿಸಿದೆ. ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು ಹಲವರಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಕೆಂಗೇರಿಯ ಆರ್ ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಲ್ಲಿಗೆ ವಿಪಕ್ಷ ನಾಯಕ ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಬಳಿಕ ಮಾತನಾಡಿರುವ ಅಶೋಕ್ ಈ ದುರಂತವು ರಾಜ್ಯ ಸರ್ಕಾರದ ನಿರ್ಲಕ್ಷ್ಯ, ಬೇಜವಾಬ್ದಾರಿತನ ಮತ್ತು ಸುರಕ್ಷತಾ ನಿಯಮಗಳ ಅನುಷ್ಠಾನದಲ್ಲಿನ ಸಂಪೂರ್ಣ ವೈಫಲ್ಯವನ್ನು ಮತ್ತೊಮ್ಮೆ ಬಯಲಿಗೆಳೆದಿದೆ. ಕಾರ್ಮಿಕರ ಜೀವ ರಕ್ಷಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಗಾಯಾಳುಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಮನವಿ ಮಾಡಿದ್ದು, ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಮೃತರ ಕುಟುಂಬಗಳಿಗೆ ನ್ಯಾಯ ದೊರಕಬೇಕು. ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು. ಮೃತರ ಕುಟುಂಬಗಳಿಗೆ ಸಮರ್ಪಕ ಪರಿಹಾರ ನೀಡಿ, ರಾಜ್ಯದ ಎಲ್ಲಾ ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ