ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲೇ ಆಯ್ತು, ಉದ್ಯೋಗ ಎಲ್ಲಿ ಸ್ವಾಮಿ: ಆರ್ ಅಶೋಕ್ ಪ್ರಶ್ನೆ

Krishnaveni K
ಸೋಮವಾರ, 1 ಡಿಸೆಂಬರ್ 2025 (14:57 IST)
ಬೆಂಗಳೂರು: ಬ್ರೇಕ್ ಫಾಸ್ಟ್ ಮೀಟಿಂಗ್ ಎಂದು ದಿನಬೆಳಗಾದರೆ ರಾಜಕಾರಣವೇ ಆಯ್ತು. ಉದ್ಯೋಗ ಎಲ್ಲಿ ಸ್ವಾಮಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಕುಸ್ತಿ ಕದನದಲ್ಲಿ ರೈತರ ಸಮಸ್ಯೆ ಸರ್ಕಾರಕ್ಕೆ ಮರೆತೇ ಹೋಗಿದೆ ಎಂದು ಆರ್ ಅಶೋಕ್ ಕಿಡಿ ಕಾರಿದ್ದಾರೆ. ಇದರ ನಡುವೆ ಸಿದ್ದರಾಮಯ್ಯ-ಡಿಕೆಶಿ ಎರಡನೇ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಸಿದ್ಧತೆ ಮಾಡಿದ್ದು ಇದರ ಬಗ್ಗೆ ಅಶೋಕ್ ವ್ಯಂಗ್ಯ ಮಾಡಿದ್ದಾರೆ.

‘ಎಲ್ಲಿದೆ ಸ್ವಾಮಿ ಉದ್ಯೋಗದ ಗ್ಯಾರೆಂಟಿ? ಎಲ್ಲಿದೆ ನೇಮಕಾತಿ ಭಾಗ್ಯ? ಬ್ರೇಕ್ ಫಾಸ್ಟ್ ಮೀಟಿಂಗ್, ಪವರ್ ಶೇರಿಂಗ್ ಅಂತ ದಿನಬೆಳಗಾದರೆ ರಾಜಕಾರಣದಲ್ಲೇ ಕಾಲಹರಣ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಆಡಳಿತವನ್ನ ಸಂಪೂರ್ಣವಾಗಿ ಮರೆತಿದೆ.

ಕಬ್ಬು, ಮೆಕ್ಕೆಜೋಳ ರೈತರ ಪ್ರತಿಭಟನೆ ನಂತರ ಈಗ ಧಾರವಾಡದಲ್ಲಿ ನಡೆಯುತ್ತಿರುವ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ.

ಸಿಎಂ ಸಿದ್ದರಾಮಯ್ಯನವರೇ ಕೂಡಲೇ ಉದ್ಯೋಗಾಕಾಂಕ್ಷಿಗಳ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ನೇಮಕಾತಿಗೆ ಆದೇಶ ಹೊರಡಿಸಿ, ಬಂಧಿಸಿರುವ ಪ್ರತಿಭಟನಾ ನಿರತ ಪರೀಕ್ಷಾರ್ಥಿಗಳ ಬಿಡುಗಡೆಗೆ ಸೂಚನೆ ನೀಡಿ’ ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯಗೆ ನಾಟಿ ಕೋಳಿ ಸ್ಪೆಷಲ್ ಮಾಡಿಸಿ ಮೀಟಿಂಗ್ ಬಗ್ಗೆ ಕೇಳಿದ್ದಕ್ಕೆ ಡಿಕೆ ಶಿವಕುಮಾರ್ ಹೀಗೆ ಹೇಳೋದಾ

ಕುಸ್ತಿ ಕದನದ ನಡುವೆ ಮತ್ತೊಂದು ಬೆಲೆ ಏರಿಕೆಗೆ ಸಿದ್ಧವಾಯ್ತಾ ಸರ್ಕಾರ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಎರಡನೇ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡುತ್ತಿರುವುದು ಇದಕ್ಕೇ

ಮುಂದಿನ ಸುದ್ದಿ
Show comments