Select Your Language

Notifications

webdunia
webdunia
webdunia
webdunia

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

R Ashok

Krishnaveni K

ಬೆಂಗಳೂರು , ಗುರುವಾರ, 20 ನವೆಂಬರ್ 2025 (11:14 IST)
ಬೆಂಗಳೂರು: ಸುಳ್ಳು ಬುರುಕ ರಾಹುಲ್ ಗಾಂಧಿ, ಜೀನ್ಸ್ ಪಾರ್ಕ್ ಎಲ್ಲಪ್ಪ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಸೋಷಿಯಲ್ ಮೀಡಿಯಾದಲ್ಲಿ ಟ್ವೀಟ್ ಮಾಡಿ ಪ್ರಶ್ನೆ ಮಾಡಿದ್ದಾರೆ.

ಈ ಹಿಂದೆ ಚುನಾವಣಾ ಪ್ರಚಾರ ಸಂದರ್ಭದಲ್ಲಿ ರಾಹುಲ್ ಗಾಂಧಿ ಬಳ್ಳಾರಿಯನ್ನು ಜೀನ್ಸ್ ಪಾರ್ಕ್ ಮಾಡುತ್ತೇವೆ ಎಂದಿದ್ದರು.  ಆದರೆ ಈಗ ಬಳ್ಳಾರಿಯಲ್ಲಿ ಜೀನ್ಸ್ ತಯಾರಿಕಾ ಘಟಕಗಳು ಮುಚ್ಚುವ ಹಂತಕ್ಕೆ ಬಂದಿದೆ. ಅದೇ ವಿಚಾರವಿಟ್ಟುಕೊಂಡು ಈಗ ಆರ್ ಅಶೋಕ್ ಪ್ರಶ್ನೆ ಮಾಡಿದ್ದಾರೆ.

‘ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಳ್ಳಾರಿಯಲ್ಲಿ "ಜೀನ್ಸ್ ಪಾರ್ಕ್" ಮಾಡುತ್ತೇವೆ, ಬಳ್ಳಾರಿಯನ್ನು "ಜೀನ್ಸ್ ರಾಜಧಾನಿ" ಮಾಡುತ್ತೇವೆ ಎಂದು ಸುಳ್ಳು ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷ ಈಗ ಸರಿಯಾದ ಮೂಲಸೌಕರ್ಯವಿಲ್ಲದೆ 36 ಜೀನ್ಸ್ ತಾರರಿಕಾ ಘಟಕಗಳು ಮುಚ್ಚುವ ಪರಿಸ್ಥಿತಿ ತಂದಿಟ್ಟಿದೆ. ಇದರಿಂದ 2 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುವ ಆತಂಕ ಎದುರಾಗಿದೆ.

ರಾಹುಲ್ ಗಾಂಧಿ ಅವರೇ, ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ಇನ್ನೂ take off ಆಗದ ನಿಮ್ಮ ಕಾಂಗ್ರೆಸ್ ಸರ್ಕಾರವನ್ನ ಈಗಲಾದರೂ ಎಬ್ಬಿಸದಿದ್ದರೆ ನಿಮ್ಮ ಪಕ್ಷಕ್ಕೆ ಬಿಹಾರದಲ್ಲಿ ಬಂದ ಗತಿಯೇ ಕರ್ನಾಟಕದಲ್ಲೂ ಬರುವುದು ನಿಶ್ಚಿತ.

ಸಿಎಂ ಸಿದ್ದರಾಮಯಯ ಅವರೇ, ಜೀನ್ಸ್ ಪಾರ್ಕ್ ನಿರ್ಮಾಣಕ್ಕೆ ಬೇಕಾದ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಿ. ಜೀನ್ಸ್ ಪಾರ್ಕ್ ನಿರ್ಮಾಣವಾಗಿ ಜೀನ್ಸ್ ತಯಾರಿಕಾ ಘಟಕಗಳಿಗೆ ಅಗತ್ಯವಾದ STP ಗಳು ಇದ್ದಿದ್ದರೆ, ಹೀಗೆ ರಾತ್ರೋರಾತ್ರಿ ಘಟಕಗಳನ್ನು ಮುಚ್ಚುವ ಪರಿಸ್ಥಿತಿ ಬರುತ್ತಿರಲಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ