Daily Horoscope
✕

ಸುಳಿವು ಸಿಕ್ಕಿದ್ರೂ ದರೋಡೆಕೋರರನ್ನು ಬಂಧಿಸಿಲ್ಲ ಯಾಕೆ: ಆರ್ ಅಶೋಕ್ ಪ್ರಶ್ನೆ

Krishnaveni K
ಗುರುವಾರ, 20 ನವೆಂಬರ್ 2025 (16:51 IST)
ಬೆಂಗಳೂರು: ದರೋಡೆ ಮಾಡುವವರಿಗೆ ಕರ್ನಾಟಕ ಒಂದು ರೀತಿ ಸ್ವರ್ಗವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಅವರು ಟೀಕಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಬ್ರಾಂಡ್ ಬೆಂಗಳೂರಿನ ಮತ್ತೊಂದು ಅವತಾರ ಬೆಂಗಳೂರು ದರೋಡೆಗಳ ನಗರ ಆಗುತ್ತಿದೆ. ಬೆಂಗಳೂರಿನಲ್ಲಿ 7 ನಿಮಿಷದಲ್ಲಿ 7 ಕೋಟಿ ಮೊತ್ತದ ದರೋಡೆ ನಡೆದಿದೆ ಎಂದು ಟೀಕಿಸಿದರು.

ಇದು ಕರ್ನಾಟಕ ಸರಕಾರದ ಹೊಸ ಸ್ಕೀಂ; ಇದು 5 ಗ್ಯಾರಂಟಿಗಳಂತಿದೆ. 7 ನಿಮಿಷದಲ್ಲಿ 7 ಕೋಟಿ ಪಡೆಯುವುದು ಹೇಗೆಂದು ಸರಕಾರವು ಜನರಿಗೆ ತೋರಿಸಿದೆ. ಜನರು ಭಯಭೀತರಾಗಿದ್ದು, ಬ್ಯಾಂಕ್‍ಗಳ ಬಳಿ ಹೋಗಲು ಆತಂಕದಿಂದಿರುವಂಥ ಪರಿಸ್ಥಿತಿ ಬಂದಿದೆ ಎಂದರು.

ಹಾಡಹಗಲಲ್ಲೇ ಇದು ಸಾಧ್ಯವೇ ಎಂದ ಅವರು, ಬೆಂಗಳೂರಿನಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಸಿ.ಸಿ.ಟಿವಿ ಕ್ಯಾಮೆರಾಗಳಿವೆ. ಒಂದು ಲಕ್ಷಕ್ಕೂ ಹೆಚ್ಚು ಜನ ಪೊಲೀಸರಿದ್ದಾರೆ. ಕಮೀಷನರ್ ಕಚೇರಿ, ಮನೆ, ಡಿ.ಜಿ. ಕಚೇರಿ, ಮನೆ ಇಲ್ಲೇ ಇದೆ. ಮುಖ್ಯಮಂತ್ರಿಗಳ ಮನೆ, ಸ್ಪೆಷಲ್ ವ್ಯಕ್ತಿ, ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಮನೆ ಕೂಡ ಇಲ್ಲೇ ಇದೆ. ಒಂದು ಕಡೆ ಕಾಂಗ್ರೆಸ್ಸಿನವರ ಹಗಲುದರೋಡೆ, ಇಲ್ಲಿ ಡಕಾಯಿತರಿಂದ ರೋಡಲ್ಲೇ ಹಗಲು ದರೋಡೆ. ಇದು ಕಾಕತಾಳೀಯ ಎಂಬಂತಿದೆ ಎಂದು ನುಡಿದರು.
ಡಿ.ಕೆ.ಶಿವಕುಮಾರ್ ಟನೆಲ್ ರಸ್ತೆಯ ಪಾಯಿಂಟ್‍ನಲ್ಲೇ ಇದಾಗಿದೆ. ಅದೂ ಕಾಕತಾಳೀಯ ಅನಿಸುತ್ತದೆ. ದರೋಡೆ ಮಾಡುವವರಿಗೆ ಕರ್ನಾಟಕ ಒಂದು ರೀತಿ ಸ್ವರ್ಗವಾಗಿದೆ. ಬೀದರ್, ಮಂಗಳೂರು ಬಳಿಕ ಈಗ ಬೆಂಗಳೂರಿಗೆ ಬಂದಿದೆ. ಅಲ್ಲಿ ಕೈಚಳಕ ತೋರಿಸುವುದೇನು? ಎಂಬಂತೆ ರಾಜಧಾನಿ ಬೆಂಗಳೂರಿನಲ್ಲಿ ಕೈಚಳಕ ತೋರಿಸಿದ್ದಾರೆ. ಸರಕಾರ ಸತ್ತು ಹೋಗಿದೆ ಎಂದು ಜನರು ತಿಳಿದುಕೊಂಡಿದ್ದಾರೆ ಎಂದು ತಿಳಿಸಿದರು.

ಸರಕಾರ, ಪೊಲೀಸರ ಭಯ ಇದ್ದಿದ್ದರೆ, ದರೋಡೆ ಮಾಡಿದರೆ ಗುಂಡು ಹಾಕುವ, ಶಿಕ್ಷೆಯ ಭಯ ಇದ್ದಲ್ಲಿ ಹೀಗೆ ಮಾಡುತ್ತಿರಲಿಲ್ಲ ಎಂದು ವಿಶ್ಲೇಷಿಸಿದರು. ಕುರ್ಚಿ ಗಲಾಟೆಗಾಗಿ ಮಂತ್ರಿಗಳು, ಮುಖ್ಯಮಂತ್ರಿ ಎಲ್ಲರೂ ದೆಹಲಿ ಕಡೆ ಮುಖ ಮಾಡಿದ್ದಾರೆ. ಕಾನೂನು ಸುವ್ಯವಸ್ಥೆ ಪೂರ್ತಿ ಹದಗೆಟ್ಟಿದೆ; ಸತ್ತು ಹೋಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

24 ಗಂಟೆಯಲ್ಲಿ ಬಂಧಿಸಬೇಕು; ಸುಳಿವು ಸಿಕ್ಕಿದೆ ಎಂದು ಹೇಳಿದ್ದಾರೆ. ಆಗಲೇ ದರೋಡೆ ಆಗಿ 24 ಗಂಟೆ ಮುಗಿದು 26 ಗಂಟೆ ಆಗಿದೆ. ಸುಳಿವೆಲ್ಲ ಸಿಕ್ಕಿದ್ದರೆ ಯಾಕೆ ಬಂಧಿಸಿಲ್ಲ ಎಂದು ಕೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪ್ಪರಂಕುಂದ್ರಂನಲ್ಲಿ ಕಾರ್ತಿಕ ದೀಪ ಬೆಳಗಲು ಸುಪ್ರೀಂಕೋರ್ಟ್ ನಲ್ಲಿ ವಾದಿಸಿದ ವಕೀಲರು ಇವರೇ ನೋಡಿ

ತಿರುಪ್ಪರಂಕುಂದ್ರ ದೀಪೋತ್ಸವದ ಭದ್ರತೆಗೆ ಬಂದ ಸಿಆರ್ ಪಿಎಫ್ ಯೋಧರಿಗೆ ಎಂಥಾ ಸ್ವಾಗತ ಸಿಕ್ತು ನೋಡಿ Video

ಲಿಖಿತ ಭರವಸೆಗೆ ಪಟ್ಟು ಹಿಡಿದ ಆಶಾ ಕಾರ್ಯಕರ್ತೆಯರು

ತಿರುಪ್ಪರಂಕುಂದ್ರಂನಲ್ಲಿ ದೀಪ ಬೆಳಗಲು ಸಿದ್ಧತೆ ಬೆನ್ನಲ್ಲೇ ದರ್ಗಾಕ್ಕೆ ಪ್ರಾರ್ಥನೆ ಮಾಡಲು ಗುಂಪಾಗಿ ಬಂದ ಮುಸ್ಲಿಮರು Video

ಕಾಲಿಗೆ ಬಿದ್ದು ನಮಸ್ಕಾರ ಮಾಡಿದ ಹುಡುಗಿಗೆ ನಂದಿ ಮಾಡಿದ್ದೇನು ನೋಡಿ: ಕ್ಯೂಟ್ Video

ಮುಂದಿನ ಸುದ್ದಿ
Show comments