Daily Horoscope

Select Your Language

Notifications

webdunia
webdunia
webdunia
webdunia

ರೊಹಿಂಗ್ಯಾಗಳ ಬಗ್ಗೆ ಮಿಡಿಯುವ ಕೆಸಿ ವೇಣುಗೋಪಾಲ್ ಮನಸ್ಸು ಕಾಸರಗೋಡಿನ ಕನ್ನಡಿಗರ ಮೇಲೆ ಯಾಕಿಲ್ಲ: ಆರ್ ಅಶೋಕ್

R Ashok
ಬೆಂಗಳೂರು: ಬಾಂಗ್ಲಾದೇಶದ ರೊಹಿಂಗ್ಯಾಗಳ ಮೇಲೆ ಮಿಡಿಯುವ ಕಾಂಗ್ರೆಸ್ ಪಕ್ಷದ ನಾಯಕ ಕೆಸಿ ವೇಣುಗೋಪಾಲ್ ಮನಸ್ಸು ಕಾಸರಗೋಡಿನ ಕನ್ನಡಿಗರ ಮೇಲೆ ಯಾಕೆ ಮಿಡಿಯುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಕೇರಳ ಹೇಳಿತೆಂದು ಕೋಗಿಲು ಲೇಔಟ್ ನಲ್ಲಿರವ ರೊಹಿಂಗ್ಯಾಗಳಿಗೆ ಮನೆ ಕಟ್ಟಿಕೊಡಲೂ ಕಾಂಗ್ರೆಸ್ ಸರ್ಕಾರ ಹಿಂದೆ ಮುಂದೆ ನೋಡಲಿಲ್ಲ. ಅದೇ ಕಾಳಜಿ ಈಗ ಕಾಸರಗೋಡಿನ ಕನ್ನಡಿಗರ ಮೇಲೆಯೂ ತೋರುತ್ತಾ ಎಂದು ಅಶೋಕ್ ಪ್ರಶ್ನೆ ಮಾಡಿದ್ದಾರೆ.

‘ಕೇರಳದಲ್ಲಿ ಆನೆ ತುಳಿತಕ್ಕೆ ಒಳಗಾಗಿ ಸತ್ತರೂ, ವಯನಾಡಿನಲ್ಲಿ ಪ್ರಕೃತಿ ವಿಕೋಪ ಉಂಟಾದರೂ, ಕೇರಳಿಗರ ಪರವಾಗಿ ಕರ್ನಾಟಕ ಸರ್ಕಾರದ ಮೇಲೆ ಸವಾರಿ ಮಾಡುವ ಸಂಸದೆ ಪ್ರಿಯಾಂಕ ಗಾಂಧಿ ಅವರು, ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯವರೆಗೆ ಮಲಯಾಳಂ ಅನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಮಲಯಾಳಂ ಭಾಷಾ ಮಸೂದೆ -2025ರ ವಿರುದ್ಧ ಧ್ವನಿ ಎತ್ತುವ ಮೂಲಕ ಈಗ ಕನ್ನಡಿಗರ ಪರ ನಿಲ್ಲುತ್ತಾರಾ?

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ತೆರವುಗೊಳಿಸುವ ವಿಷಯದಲ್ಲಿ ಕೇರಳದ ಪರ ತೋರಿದ ಕಾಳಜಿಯನ್ನು ಕಾಂಗ್ರೆಸ್ ನಾಯಕರು ಈಗ ಕನ್ನಡಿಗರ ಪರವಾಗಿ ತೋರುತ್ತಾರಾ?

ಅಕ್ರಮ ವಲಸಿಗರು ಕರ್ನಾಟಕದ ಭೂಮಿಯನ್ನು ಒತ್ತುವರಿ ಮಾಡಿಕೊಂಡರೂ, "ಮಾನವೀಯತೆ" ದೃಷ್ಟಿಯಿಂದ ಮನೆ ಕೊಡಬೇಕು ಎಂದು ರೋಹಿಂಗ್ಯಗಳು, ಬಾಂಗ್ಲಾದೇಶಿಗಳ ಪರವಾಗಿ ಮಿಡಿಯುವ ಕೆಸಿ ವೇಣುಗೋಪಾಲ್ ಅವರ ಹೃದಯ ಈಗ, ಕಾಸರಗೋಡಿನ ಕನ್ನಡಿಗರ ಪರವಾಗಿ ಮಿಡಿಯುದಿಲ್ಲವೇ?

ಕರ್ನಾಟಕದ ಸ್ವಾಭಿಮಾನ, ಆತ್ಮಗೌರವಕ್ಕೆ ಪದೇ ಪದೇ ಧಕ್ಕೆ ತರುತ್ತಿರುವ ಕಾಂಗ್ರೆಸ್ ಪಕ್ಷದ ಕೇರಳ ಪಟಾಲಂ, ಕನ್ನಡಿಗರ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ರಾಜಕೀಯ ಲಾಭಕ್ಕಾಗಿ, ಯಾರದ್ದೋ ಸ್ವಾರ್ಥಕ್ಕಾಗಿ ಕರ್ನಾಟಕದ ಮತ್ತು ಕನ್ನಡಿಗರ ಹಿತಾಸಕ್ತಿಯನ್ನು ಪದೇ ಪದೇ ಬಲಿ ಕೊಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಕನ್ನಡಿಗರು ತಕ್ಕ ಪಾಠ ಕಲಿಸುವ ದಿನ ಬಹಳ ದೂರವಿಲ್ಲ’ ಎಂದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಇದ್ದಕ್ಕಿದ್ದಂತೆ ಹುಲಿಯೊಂದು ನಿಮ್ಮ ಎದುರು ಬಂದು ಘರ್ಜಿಸಿದರೆ ಏನಾಗುತ್ತೆ: ಈ ಎದೆ ಝಲ್ಲೆನಿಸುವ ವಿಡಿಯೋ ನೋಡಿ