Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲೇ 3 ಲಕ್ಷ ಅಕ್ರಮ ಬಾಂಗ್ಲಾ ವಲಸಿಗರು: ಆರ್ ಅಶೋಕ್ ಶಾಕಿಂಗ್ ಮಾಹಿತಿ

R Ashok

Krishnaveni K

ಬೆಂಗಳೂರು , ಸೋಮವಾರ, 24 ನವೆಂಬರ್ 2025 (10:02 IST)
ಬೆಂಗಳೂರು: ಬೆಂಗಳೂರಿನಲ್ಲೇ 3 ಲಕ್ಷ ಬಾಂಗ್ಲಾ ಅಕ್ರಮ ವಲಸಿಗರಿರುವ ಶಂಕೆಯಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಶಾಕಿಂಗ್ ಮಾಹಿತಿ ನೀಡಿದ್ದು ಈ ಕಾರಣಕ್ಕೆ ಎಸ್ಐಆರ್ ಆಗಬೇಕು ಎಂದಿದ್ದಾರೆ.

ಚುನಾವಣಾ ಆಯೋಗ ದೇಶದಾದ್ಯಂತ ಒಂದೊಂದೇ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ ಮಾಡುತ್ತಿದೆ. ಆದರೆ ಇದು ಬಿಜೆಪಿಗೆ ಅನುಕೂಲ ಮಾಡಿಕೊಡುತ್ತಿದೆ ಎಂದು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ. ತಮಿಳುನಾಡು, ಕೇರಳ ಮೊದಲಾದ ರಾಜ್ಯಗಳಲ್ಲಿ ಈಗಾಗಲೇ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿದೆ. ಕರ್ನಾಟಕದಲ್ಲೂ ಶೀಘ್ರದಲ್ಲೇ ಎಸ್ಐಆರ್ ನಡೆಯಬೇಕು ಎಂದು ಆರ್ ಅಶೋಕ್ ಆಗ್ರಹಿಸಿದ್ದು ಇದಕ್ಕೆ ಕಾರಣವನ್ನೂ ನೀಡಿದ್ದಾರೆ.

‘ಕರ್ನಾಟಕದಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ ಆಗಬೇಕು. ಬೆಂಗಳೂರು ಒಂದರಲ್ಲೇ ಸುಮಾರು 3 ಲಕ್ಷ ಅಕ್ರಮ ಬಾಂಗ್ಲಾ ವಲಸಿಗರು ಇರುವ ಶಂಕೆ ಇದೆ.

ಅಕ್ರಮ ವಲಸಿಗರನ್ನೇ ವೋಟ್ ಬ್ಯಾಂಕ್ ಮಾಡಿಕೊಂಡಿರುವ ಕಾಂಗ್ರೆಸ್ ಪಕ್ಷ ಇದೇ ಕಾರಣಕ್ಕೆ ಮತದಾರರ ಪಟ್ಟಿ ಪರಿಷ್ಕರಣೆಗೆ ವಿರೋಧ ಮಾಡುತ್ತಿದೆ. ಕರ್ನಾಟಕದಲ್ಲೂ ಬಿಹಾರ ಮಾದರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಆಗಲಿ’ ಎಂದು ಅವರು ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಲದಲ್ಲಿ ಮುಂಬರುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಈಗಾಗಲೇ ಎಸ್ಐಆರ್ ಪ್ರಕ್ರಿಯೆ ಶುರು ಮಾಡಿದೆ. ಇಲ್ಲಿ ಈಗಾಗಲೇ ಭಾರೀ ಸಂಖ್ಯೆಯಲ್ಲಿ ಬಾಂಗ್ಲಾದಿಂದ ಅಕ್ರಮವಾಗಿ ವಲಸೆ ಬಂದು ಇಲ್ಲಿನ ಭ್ರಷ್ಟ ಅಧಿಕಾರಿಗಳಿಗೆ ಲಂಚ ಕೊಟ್ಟು ವೋಟರ್ ಐಡಿ, ಆಧಾರ್ ಮಾಡಿಸಿಕೊಂಡಿರುವವರು ಇದ್ದಾರೆ. ಅವರೆಲ್ಲರ ಬಣ್ಣ ಈಗ ಎಸ್ಐಆರ್ ಪ್ರಕ್ರಿಯೆ ವೇಳೆ ಬಯಲಾಗುತ್ತಿದೆ. ಈ ಕಾರಣಕ್ಕೆ ಸಾವಿರಾರು ಅಕ್ರಮ ಬಾಂಗ್ಲಾ ವಲಸಿಗರು ಈಗ ದೇಶ ಬಿಟ್ಟು ಓಡಿ ಹೋಗುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕುರ್ಚಿ ಫೈಟ್ ನಿವಾರಣೆಗೆ ಹೈಕಮಾಂಡ್ ಅಖಾಡಕ್ಕೆ: ಈಗೆಲ್ಲಿದ್ದಾರೆ ರಾಹುಲ್ ಗಾಂಧಿ