Webdunia - Bharat's app for daily news and videos

Install App

ಜಾತಿಗಣತಿ ಬಗ್ಗೆ ಆರ್‌.ಅಶೋಕ್ ಹೇಳಿಕೆಯಿಂದ ಮನಸ್ಸು ನಿರಾಳವಾಯಿತು: ಸಿಎಂ ಸಿದ್ದರಾಮಯ್ಯ

Sampriya
ಮಂಗಳವಾರ, 8 ಅಕ್ಟೋಬರ್ 2024 (16:54 IST)
Photo Courtesy X
ಬೆಂಗಳೂರು: ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು-ವಿರೋಧ ಇಲ್ಲ, ಅದರ ಅನುಷ್ಠಾನಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂಬ ವಿರೋಧಪಕ್ಷದ ನಾಯಕರಾದ ಆರ್‌ ಅಶೋಕ್ ಅವರ ಹೇಳಿಕೆಯನ್ನು ಓದಿ ಮನಸ್ಸು ನಿರಾಳವಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಪಕ್ಷ ನಾಯಕ ಆರ್‌ ಅಶೋಕ್ ಜಾತಿಗಣತಿ ಬಗ್ಗೆ ಹಲವು ಪ್ರಶ್ನೆಗಳನ್ನು ಸಿಎಂ ಸಿದ್ದರಾಮಯ್ಯ ಮುಂದಿಟ್ಟಿದ್ದರು. ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡು ಪೋಸ್ಟ್ ಹಂಚಿಕೊಂಡಿದ್ದರು.

ಆರ್‌ ಅಶೋಕ್‌ ಪೋಸ್ಟ್ ಹೀಗಿದೆ:  ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು ಇಲ್ಲ ಅಥವಾ ವಿರೋಧವೂ ಇಲ್ಲ. ಬಿಜೆಪಿಯ ಮೂಲಸಿದ್ಧಾಂತವಾದ 'ಅಂತ್ಯೋದಯ'ದ ಪರಿಕಾಲ್ಪನೆಯಲ್ಲೇ ತಳ ಸಮುದಾಯಗಳನ್ನ ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಸಾಮಾಜಿಕ ನ್ಯಾಯದ ಬದ್ಧತೆ ಅಡಗಿದೆ. ಅದನ್ನ ಸಾಕಾರಗೊಳಿಸುವ ಯಾವ ಕ್ರಮಕ್ಕಾದರೂ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ.

ಆದರೆ ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯ ಹಾವು-ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೇಳಲು, ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನ ಏಣಿಯಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ ಎಂದು ಬರೆದುಕೊಂಡಿದ್ದರು.

ಈ ಸಂಬಂದ ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿ ಕೌಂಟರ್ ಕೊಟ್ಟಿದ್ದಾರೆ.

'ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು-ವಿರೋಧ ಇಲ್ಲ, ಅದರ ಅನುಷ್ಠಾನಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ' ಎಂಬ ವಿರೋಧಪಕ್ಷದ ನಾಯಕರಾದ ಆರ್‌ ಅಶೋಕ್ ಅವರ ಹೇಳಿಕೆಯನ್ನು ಓದಿ ಮನಸ್ಸು ನಿರಾಳವಾಯಿತು.

ಅಶೋಕ್ ಅವರೇ, ನಮ್ಮ ಪಕ್ಷದೊಳಗಿನ ತಕರಾರುಗಳ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗಬೇಡಿ, ಅವುಗಳನ್ನು ನಾವು ಬಗೆಹರಿಸಿಕೊಳ್ಳುತ್ತೇವೆ. ನೀವು ನುಡಿದಂತೆ ನಡೆದರೆ ಜಾತಿ ಜನಗಣತಿ ಜಾರಿಯಾಗಿ ನೀವೇ ಹೇಳಿಕೊಂಡಿರುವ ನಿಮ್ಮ ಪಕ್ಷದ  ಕನಸಿನ 'ಅಂತ್ಯೋದಯ' ಸಾಕಾರಗೊಳ್ಳುತ್ತದೆ ಎಂಬ ವಿಶ್ವಾಸ ನನಗಿದೆ. ನೀವು ಮಾತ್ರ, ಕೊಟ್ಟ ಮಾತಿಗೆ ತಪ್ಪಿ ನಡೆಯಬಾರದು ಅಷ್ಟೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಮುಂದಿನ ಸುದ್ದಿ
Show comments