Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯನವರೇ ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ ಎಂದ ಆರ್‌ ಅಶೋಕ್

ಸಿದ್ದರಾಮಯ್ಯನವರೇ ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ ಎಂದ ಆರ್‌ ಅಶೋಕ್

Sampriya

ಬೆಂಗಳೂರು , ಶನಿವಾರ, 3 ಆಗಸ್ಟ್ 2024 (16:57 IST)
ಬೆಂಗಳೂರು:  ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದಲ್ಲಿ ಪ್ರಾಮಾಣಿಕ ದಲಿತ ಅಧಿಕಾರಿ ಚಂದ್ರಶೇಖರನ್ ಅವರನ್ನು ಬಲಿ ಪಡೆದ ಕಾಂಗ್ರೆಸ್ ಸರ್ಕಾರ, ಈಗ ವರ್ಗಾವಣೆಗಾಗಿ ಲಂಚದ ಬೇಡಿಕೆ ಇಟ್ಟು ಮತ್ತೊಬ್ಬ ದಲಿತ ಅಧಿಕಾರಿ ಯಾದಗಿರಿಯ ಪಿಎಸ್ಐ ಪರಶುರಾಮ್ ಅವರನ್ನ ಬಲಿ ಪಡೆದುಕೊಂಡಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಹಾಕಿ ಆಕ್ರೋಶ ಹೊರಹಾಕಿರುವ ಆರ್‌ ಅಶೋಕ್ ಅವರು, ಸಿಎಂ ಸಿದ್ದರಾಮಯ್ಯನವರೇ, ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ ಎಂಬಂತೆ, ಮುಖ್ಯಮಂತ್ರಿಗಳು, ಸಚಿವರು ಭ್ರಷ್ಟಾಚಾರಕ್ಕೆ ಇಳಿದಿರುವಾಗ ಇನ್ನು ಶಾಸಕರು ಸುಮ್ಮನಿರುತ್ತಾರೆಯೇ?

ಒತ್ತಡ, ಮಾನಸಿಕ ಕಿರುಕುಳದಿಂದ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಯಾದಗಿರಿ ಪಿಎಸ್ ಐ ಪರಶುರಾಮ್ ಅವರ ಸಾವಿಗೆ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ಮತ್ತು ಅವರ ಪುತ್ರ ಸನ್ನಿಗೌಡ ಕಾರಣ ಎಂದು ಅವರ ಪತ್ನಿ ಮತ್ತು ಕುಟುಂಬಸ್ಥರು ಗಂಭೀರ ಆರೋಪ ಮಾಡಿ ಲಿಖಿತ ದೂರು ಕೊಟ್ಟಿದ್ದಾರೆ.

ಪ್ರಾಮಾಣಿಕ, ದಕ್ಷ ಅಧಿಕಾರಿಗಳಿಗೆ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದಲ್ಲಿ ಉಳಿಗಾಲವಿಲ್ಲದಂತಾಗಿದ್ದು, ಈ ಕೂಡಲೇ ಶಾಸಕ ಚೆನ್ನಾರೆಡ್ಡಿ ಅವರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಪಡೆಯಬೇಕು ಮತ್ತು ಈ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಒತ್ತಾಯಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ 10 ವರ್ಷಕ್ಕಿಂತ 10 ತಿಂಗಳು ಸರ್ಕಾರ ನಡೆಸಲಿ: ಡಿಕೆಶಿಗೆ ಕುಮಾರಸ್ವಾಮಿ ಸವಾಲು