ಸಿದ್ದರಾಮಯ್ಯನವರೇ ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ ಎಂದ ಆರ್‌ ಅಶೋಕ್

Sampriya
ಶನಿವಾರ, 3 ಆಗಸ್ಟ್ 2024 (16:57 IST)
ಬೆಂಗಳೂರು:  ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದಲ್ಲಿ ಪ್ರಾಮಾಣಿಕ ದಲಿತ ಅಧಿಕಾರಿ ಚಂದ್ರಶೇಖರನ್ ಅವರನ್ನು ಬಲಿ ಪಡೆದ ಕಾಂಗ್ರೆಸ್ ಸರ್ಕಾರ, ಈಗ ವರ್ಗಾವಣೆಗಾಗಿ ಲಂಚದ ಬೇಡಿಕೆ ಇಟ್ಟು ಮತ್ತೊಬ್ಬ ದಲಿತ ಅಧಿಕಾರಿ ಯಾದಗಿರಿಯ ಪಿಎಸ್ಐ ಪರಶುರಾಮ್ ಅವರನ್ನ ಬಲಿ ಪಡೆದುಕೊಂಡಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಹಾಕಿ ಆಕ್ರೋಶ ಹೊರಹಾಕಿರುವ ಆರ್‌ ಅಶೋಕ್ ಅವರು, ಸಿಎಂ ಸಿದ್ದರಾಮಯ್ಯನವರೇ, ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ ಎಂಬಂತೆ, ಮುಖ್ಯಮಂತ್ರಿಗಳು, ಸಚಿವರು ಭ್ರಷ್ಟಾಚಾರಕ್ಕೆ ಇಳಿದಿರುವಾಗ ಇನ್ನು ಶಾಸಕರು ಸುಮ್ಮನಿರುತ್ತಾರೆಯೇ?

ಒತ್ತಡ, ಮಾನಸಿಕ ಕಿರುಕುಳದಿಂದ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಯಾದಗಿರಿ ಪಿಎಸ್ ಐ ಪರಶುರಾಮ್ ಅವರ ಸಾವಿಗೆ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ಮತ್ತು ಅವರ ಪುತ್ರ ಸನ್ನಿಗೌಡ ಕಾರಣ ಎಂದು ಅವರ ಪತ್ನಿ ಮತ್ತು ಕುಟುಂಬಸ್ಥರು ಗಂಭೀರ ಆರೋಪ ಮಾಡಿ ಲಿಖಿತ ದೂರು ಕೊಟ್ಟಿದ್ದಾರೆ.

ಪ್ರಾಮಾಣಿಕ, ದಕ್ಷ ಅಧಿಕಾರಿಗಳಿಗೆ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದಲ್ಲಿ ಉಳಿಗಾಲವಿಲ್ಲದಂತಾಗಿದ್ದು, ಈ ಕೂಡಲೇ ಶಾಸಕ ಚೆನ್ನಾರೆಡ್ಡಿ ಅವರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಪಡೆಯಬೇಕು ಮತ್ತು ಈ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಒತ್ತಾಯಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮೋಹನ್ ಲಾಲ್ ಬಳಿಯಿದ್ದ ಆನೆ ದಂತ ಪ್ರಕರಣ: ನಟನಿಗೆ ಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ಪತ್ನಿ ಡಾ.ಕೃತಿಕಾ ಹತ್ಯೆ ಬಳಿಕ ಪಾಪ ಪ್ರಜ್ಞೆ: ಮಹೇಂದ್ರ ರೆಡ್ಡಿ ಏನ್ ಮಾಡಿದ ಗೊತ್ತಾ

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನದ ಬಗ್ಗೆ ಕೋರ್ಟ್ ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments