Daily Horoscope

Select Your Language

Notifications

webdunia
webdunia
webdunia
webdunia

ವಿದ್ಯುತ್ ದರ ಮತ್ತೆ ಏರಿಕೆ: ಸಿದ್ದರಾಮಯ್ಯ ಬೆಲೆ ಏರಿಕೆಯ ಬಾದ್ ಷಹಾ ಎಂದ ಆರ್ ಅಶೋಕ್

R Ashok
ಬೆಂಗಳೂರು: ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಅಯೋಗವು ಗೃಹ ಬಳಕೆಯ ವಿದ್ಯುತ್ ದರ ಪರಿಷ್ಕರಿಸಿದ್ದು ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಏರಿಕೆಯಾಗಲಿದೆ. ಇದಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಯೂನಿಟ್ ಗೆ 56 ಪೈಸೆಯಷ್ಟು ಹೆಚ್ಚಳವಾಗಲಿದೆ. ವಿದ್ಯುತ್ ದರ ಏರಿಕೆ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಬೆಲೆ ಏರಿಕೆಯ ಬಾದ್ ಷಹಾ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಕನ್ನಡಿಗರನ್ನು ಮತ್ತೊಮ್ಮೆ ಸುಲಿಗೆ ಮಾಡಲು ಹೊರಟಿದೆ. ಅಧಿಕಾರಕ್ಕೆ ಬರುವ ಮುನ್ನ "200 ಯೂನಿಟ್ ವಿದ್ಯುತ್ ಫ್ರೀ" ಎಂದು ಬಣ್ಣಬಣ್ಣದ ಮಾತುಗಳನ್ನಾಡಿ, ಜನರನ್ನು ನಂಬಿಸಿ ದ್ರೋಹ ಮಾಡಿರುವ ಈ ಸರ್ಕಾರ ಪದೇ ಪದೇ ವಿದ್ಯುತ್ ದರ ಏರಿಸುವ ಮೂಲಕಕನ್ನಡಿಗರ ಜೇಬಿಗೆ ಕನ್ನ ಹಾಕುವುದನ್ನೇ ಮುಖ್ಯ ಅಜೆಂಡಾ ಮಾಡಿಕೊಂಡಿದೆ.

ಅದರಲ್ಲೂ ಈ ದರ ಏರಿಕೆಯನ್ನು 2025ರ ಏಪ್ರಿಲ್‌ ತಿಂಗಳಿನಿಂದ ಪೂರ್ವಾನ್ವಯವಾಗುವ ನಿರ್ಧಾರ ಮಾಡಿರುವುದು ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಗೆ ಸ್ಪಷ್ಟ ನಿದರ್ಶನ.

ಗೃಹಲಕ್ಷ್ಮಿ ಯೋಜನೆಯಡಿ ಒಂದು ಕೈಯಲ್ಲಿ ಹಣ ಕೊಟ್ಟಂತೆ ನಾಟಕವಾಡಿ, ಕರೆಂಟ್ ಬಿಲ್ ಏರಿಸುವ ಮೂಲಕ ಮತ್ತೊಂದು ಕೈಯಲ್ಲಿ ಜನರ ರಕ್ತ ಹೀರುತ್ತಿರುವುದು ಈ ಸರ್ಕಾರದ ಅಸಲಿ ಮುಖ. ಸ್ಮಾರ್ಟ್ ಮೀಟರ್ ಅಳವಡಿಕೆಯ ಹೆಸರಿನಲ್ಲಿ ಈಗಾಗಲೇ ಸಾವಿರಾರು ಕೋಟಿ ರೂಪಾಯಿಗಳ ಹಗಲು ದರೋಡೆ ಮಾಡುತ್ತಿರುವ ಈ ಕಾಂಗ್ರೆಸ್ ಸರ್ಕಾರ, ಈಗ ಮತ್ತೊಂದು ದರ ಏರಿಕೆಯ ಮೂಲಕ ಸಾಮಾನ್ಯ ಜನರ ಬದುಕನ್ನು ಸಂಕಷ್ಟಕ್ಕೆ ದೂಡುತ್ತಿದೆ.

ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲದಿದ್ದರೂ, ಬೆಲೆ ಏರಿಕೆ ಮಾಡುವಲ್ಲಿ ಮಾತ್ರ ಈ ಸರ್ಕಾರ ನಂಬರ್ ಒನ್ ಸ್ಥಾನದಲ್ಲಿದೆ. ಇದು ಕೇವಲ ಬೆಲೆ ಏರಿಕೆಯಲ್ಲ, ಇದು ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ನಡೆಸುತ್ತಿರುವ ದೊಡ್ಡ ವಂಚನೆ.

ಬೆಲೆ ಏರಿಕೆಯೇ ಕಾಂಗ್ರೆಸ್ಸಿನ 6ನೇ ಗ್ಯಾರಂಟಿ ಎಂದು ಇಡೀ ರಾಜ್ಯಕ್ಕೆ ಈಗ ಮನವರಿಕೆಯಾಗಿದೆ. ಈ ದರ ಏರಿಕೆಯ ನಿರ್ಧಾರವನ್ನು ಕೂಡಲೇ ಕೈಬಿಡದಿದ್ದರೆ, ಕನ್ನಡಿಗರು ನಿಮ್ಮ ಈ ಭ್ರಷ್ಟ ಮತ್ತು ಜನವಿರೋಧಿ ಆಡಳಿತಕ್ಕೆ ತಕ್ಕ ಪಾಠ ಕಲಿಸುವುದು ಖಂಡಿತ. ರಾಜ್ಯದ ಜನತೆ ದಂಗೆ ಏಳುವ ಮುನ್ನ ಮುಖ್ಯಮಂತ್ರಿಗಳು ಎಚ್ಚೆತ್ತುಕೊಳ್ಳಲಿ’ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದೇಶದ ಮಹಿಳೆಯರು ಯಾವತ್ತೂ ನಿಮ್ಮನ್ನು ಕ್ಷಮಿಸಲಾರರು: ಮಹಿಳಾ ಮೀಸಲು ಮಸೂದೆಗೆ ಸೋಲಿಗೆ ಅಮಿತ್ ಶಾ ಕಿಡಿ