Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷಕ್ಕೆ ಕಸದಲ್ಲಿ ರಸ ಮಾಡಲು ಯೋಜನೆ: ಆರ್. ಅಶೋಕ್ ಆರೋಪ

Krishnaveni K
ಬುಧವಾರ, 28 ಮೇ 2025 (15:58 IST)
ಬೆಂಗಳೂರು: ಕಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಸ ಮಾಡಲು ಯೋಜನೆ ತಂದಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆರೋಪಿಸಿದ್ದಾರೆ.
 
ಬಿಜೆಪಿ ನಿಯೋಗವು, ‘ಬೆಂಗಳೂರಿನಲ್ಲಿ ದುಬಾರಿ ಬೆಲೆ ಏರಿಕೆ’ ವಿರುದ್ಧ ಇಂದು ಬಿಬಿಎಂಪಿ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿತು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಆರ್. ಅಶೋಕ್ ಅವರು, ಇಡೀ ದೇಶದಲ್ಲಿ ಕಸ ವಿಲೇವಾರಿಗೆ ಗರಿಷ್ಠ ತೆರಿಗೆ ಹಾಕಿದ ಪುಣ್ಯಾತ್ಮರು ಈ ಕಾಂಗ್ರೆಸ್ಸಿನವರು ಎಂದರು. ಹಾಲಿನಿಂದ ಆಲ್ಕೋಹಾಲ್ ವರೆಗೆ ದುಬಾರಿ ದರ ಏರಿüಸಲಾಗಿದೆ ಎಂದು ಟೀಕಿಸಿದರು. ದರ ಏರಿಸಿದ್ದರಿಂದ ಕರೆಂಟ್ ಮುಟ್ಟಿದರೆ ಶಾಕ್ ಹೊಡೆಯುವಂತಾಗಿದೆ ಎಂದು ದೂರಿದರು.
 
ಇವರು ಮನೆ ಕಟ್ಟುವವರಲ್ಲ; ಮನೆ ಹಾಳು ಮಾಡುವವರು ಎಂದರಲ್ಲದೆ, ಹಿಂದೆ ಕೆಂಪೇಗೌಡರು ನಾಡು ಕಟ್ಟಿ ನಾಡಪ್ರಭು ಎನಿಸಿದ್ದರು. ಕಾಂಗ್ರೆಸ್ಸಿನವರು ನಾಡು ಹಾಳು ಮಾಡಿದ ಬಿರುದನ್ನು ತೆಗೆದುಕೊಂಡಿದ್ದಾರೆ ಎಂದು ಟೀಕಿಸಿದರು. ಕಸದ ಸೆಸ್ 240 ಕೋಟಿ ಸಂಗ್ರಹವಾಗುತ್ತದೆ. ಕಸದ ನಿರ್ವಹಣೆಗೆ 145 ಕೋಟಿಗೆ ಟೆಂಡರ್ ಆಗಿದೆ. ಬಳಕೆದಾರರ ಶುಲ್ಕ ಸಂಗ್ರಹಿಸಿದರೆ 500ರಿಂದ 600 ಕೋಟಿ ಲಭಿಸಲಿದೆ ಎಂದು ವಿಶ್ಲೇಷಿಸಿದರು.
 
ಯಾರ ಮನೆ ಹಾಳು ಮಾಡಲು ಈ ಶುಲ್ಕ ಸಂಗ್ರಹಿಸುತ್ತೀರಿ ಎಂದು ಕೇಳಿದರು. ಇತರ ರಾಜ್ಯಗಳಲ್ಲಿ ಒಂದೋ ಸೆಸ್ ಇಲ್ಲವೇ ಬಳಕೆದಾರರ ಶುಲ್ಕ ಸಂಗ್ರಹಿಸುತ್ತಾರೆ. ಇಲ್ಲಿ ಎರಡನ್ನೂ ಸಂಗ್ರಹಿಸುತ್ತಾರೆ ಎಂದು ಆಕ್ಷೇಪಿಸಿದರು. ಇದರಿಂದ ಬಾಡಿಗೆ ಹೆಚ್ಚಾಗುತ್ತದೆ. ಬಾಡಿಗೆದಾರರಿಗೂ ಮನೆ ಮಾಲೀಕರಿಗೂ ಜಗಳ ಶುರುವಾಗುತ್ತದೆ ಎಂದು ವಿವರಿಸಿದರು.
 
ಹಿಂದೆ ನಮ್ಮ ಸರಕಾರ ಇದ್ದಾಗ ಸಂಗ್ರಹಿಸಿದ ಕಸಕ್ಕೆ ಕೆಜಿ ಲೆಕ್ಕದಲ್ಲಿ ಸೆಸ್ ಸಂಗ್ರಹಿಸುತ್ತಿದ್ದೆವು. ಇವರು ನಿವೇಶನದ ಚದರಡಿ ಲೆಕ್ಕದಲ್ಲಿ ಶುಲ್ಕ ಪಡೆಯುತ್ತಾರೆ. ಇವರಿಗೆ ಗ್ಯಾರಂಟಿಗೆ ಹಣ ಹೊಂದಿಸಲು ಹೀಗೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಬೆಂಗಳೂರಿನ ಶಾಸಕರ ಸಭೆ ಕರೆದು ತೆರಿಗೆ ದರ ಹೆಚ್ಚಳಕ್ಕೆ ಕಾರಣ ಏನು? ಎಷ್ಟು ದರ ಏರಿಸಿದ್ದೀರಿ ಎಂಬ ಕುರಿತು ವಿವರವನ್ನು ಕೊಡುವಂತೆ ಅವರು ಆಗ್ರಹಿಸಿದರು. ಬಳಿಕ ಇದನ್ನು ಅನುಷ್ಠಾನಕ್ಕೆ ತರಲು ಒತ್ತಾಯಿಸಿದರು. ಚದರಡಿ ಲೆಕ್ಕದಲ್ಲಿ ಕಸದ ಶುಲ್ಕ ವಿಧಿಸದೆ ಅದನ್ನು ಕೆಜಿ ಲೆಕ್ಕದಲ್ಲಿ ವಿಧಿಸುವಂತೆ ಕೋರಿದ್ದೇವೆ ಎಂದು ವಿವರ ನೀಡಿದರು.
 
ಇಲ್ಲವಾದರೆ ಬೆಂಗಳೂರಿನ ಜನರ ಶಾಪ ನಿಮಗೆ ತಟ್ಟಲಿದೆ ಎಂದು ಎಚ್ಚರಿಸಿದರು. ಚೆನ್ನೈ, ಮಹಾರಾಷ್ಟ್ರದ ನಗರಗಳು, ಕೊಚ್ಚಿ ಮೊದಲಾದ ಕಡೆ ಇಷ್ಟು ತೆರಿಗೆ ಇಲ್ಲ; ಗ್ಯಾರಂಟಿ ಅನುಷ್ಠಾನಕ್ಕಾಗಿ ಕಾಂಗ್ರೆಸ್ಸಿನವರು ಬೆಂಗಳೂರಿನ ಜನರ ಮೇಲೆ ಹೊರೆ ಹಾಕುತ್ತಿದ್ದಾರೆ ಎಂದು ಹೇಳಿದರು.
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

ಅತ್ಯಾಚಾರ ಪ್ರಕರಣ: ಇದೇ 30ರಂದು ಪ್ರಜ್ವಲ್ ರೇವಣ್ಣಗೆ ಜಾಮೀನಾ, ಜೈಲಾ, ಮಹತ್ವದ ತೀರ್ಪು

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ನೂರಾರು ಹುಡುಗರ ಗುಂಪೊಂದು ಹಾವು ಹಿಡಿದು ಗುಡ್ಡವೇರಿದ ವಿಡಿಯೋ, ಭಯಾನಕವಾಗಿರುವ ಸಂಪ್ರದಾಯದ ಹಿಂದಿದೆ ನಂಬಿಕೆ

ಮುಂದಿನ ಸುದ್ದಿ
Show comments